ಬೆಳಗಾವಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಳಿಯ ಸೋಲನುಭವಿಸಿದ್ದಾರೆ. ಮಹಾರಾಷ್ಟ್ರದ ಚಂದಗಡ ವಿಧಾನಸಭಾ ಕ್ಷೇತ್ರದಿಂದ ರಮೇಶ್ ಜಾರಕಿಹೊಳಿ ಅಳಿಯ ವಿನಾಯಕ್ ಪಾಟೀಲ್ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದರು.
'ಮಹಾ' ಅಖಾಡದಲ್ಲಿ ಸೋಲು ಕಂಡ ರಮೇಶ್ ಜಾರಕಿಹೊಳಿ ಅಳಿಯ! - ರಮೇಶ್ ಜಾಕಿಹೊಳಿ ಅಳಿಯ ವಿನಾಯಕ್ ಪಾಟೀಲ್ ಸೋಲಿನ ಸುದ್ದಿ
ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಳಿಯ ವಿನಾಯಕ್ ಪಾಟೀಲ್ ಮಹಾರಾಷ್ಟ್ರದ ಚಂದಗಡ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದು ಸೋಲನುಭವಿಸಿದ್ದಾರೆ.
ರಮೇಶ್ ಜಾರಕಿಹೊಳಿ ಅಳಿನ ಹೀನಾಯ ಸೋಲು
ವಿನಾಯಕ ಪಾಟೀಲ ಅವರಿಗೆ ಟಿಕೆಟ್ ಕೊಡಿಸಲು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ದೊಡ್ಡ ಮಟ್ಟದಲ್ಲಿ ಲಾಬಿ ಮಾಡಿದ್ದರಾದರೂ ರಮೇಶ್ ಬೇಡಿಕೆಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೊನೆ ಕ್ಷಣದಲ್ಲಿ ವಿನಾಯಕ ಪಾಟೀಲ ಪಕ್ಷೇತರರಾಗಿ ಕಣಕ್ಕಿಳಿದಿದ್ದರು. ಆದರೆ ವಿನಾಯಕ ಪಾಟೀಲ ಸೋತಿದ್ದಾರೆ.