ಕರ್ನಾಟಕ

karnataka

ETV Bharat / state

ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ: ಸಿಎಂ ಹೇಳಿಕೆ ಬಗ್ಗೆ ಚರ್ಚೆ - Disqualified MLA Ramesh Zarakiholi's decision to hold a meeting with MLAs

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಮೇಶ್​ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಬೆಂಗಳೂರಿನಲ್ಲಿ ಅನರ್ಹ ಶಾಸಕರು ಸಭೆ ಸೇರಿ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ

By

Published : Nov 3, 2019, 3:25 PM IST

ಬೆಳಗಾವಿ: ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬ ಸಿಎಂ ಹೇಳಿಕೆ ಬೆನ್ನಲ್ಲೇ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ದಿಢೀರ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಮೇಶ್​ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಬೆಂಗಳೂರಿನಲ್ಲಿ ಅನರ್ಹ ಶಾಸಕರು ಸಭೆ ಸೇರಿ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ

ಸಿಎಂ ಹೇಳಿಕೆಯ ಆಡಿಯೋ ರಿಲೀಸ್​ನಿಂದ ಕಾಂಗ್ರೆಸ್ ‌ಸುಪ್ರೀಂಕೋರ್ಟ್ ಮೆಟ್ಟಿಲೇರಲು‌ ನಿರ್ಧರಿಸಿದೆ. ಈ ಬೆಳವಣಿಗೆ ಕುರಿತು ವಕೀಲರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ನಿರಾಕರಿಸಿದರು.

ABOUT THE AUTHOR

...view details