ಬೆಳಗಾವಿ:ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದರಿದ್ರ ಸರ್ಕಾರ ಎಂದ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ ಕಣ್ಣು ಕಾಮಾಲೆಯಾಗಿವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದರು.
ರಾಜ್ಯದ ಅಭಿವೃದ್ಧಿಗೆ ಉತ್ತಮ ಬಜೆಟ್: ಸಿದ್ದರಾಮಯ್ಯರದ್ದು ಕಾಮಾಲೆ ಕಣ್ಣು ಎಂದ ಜಾರಕಿಹೊಳಿ! - ರಾಜ್ಯ ಬಜೆಟ್-2020
ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉತ್ತಮ ಬಜೆಟ್ ನೀಡಿದ್ದು, ಎಲ್ಲ ಇಲಾಖೆಗಳಿಗೂ ಸಮನಾಗಿ ಹಂಚಿಕೆ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಣ್ಣು ಕಾಮಾಲೆಯಾಗಿದೆ. ಮುಂದೆ ಒಳ್ಳೆಯ ದಿನಗಳು ಬಂದಾಗ ಗೊತ್ತಾಗುತ್ತೆ. ಯಾರು ದರಿದ್ರರು ಎಂಬುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದರು. ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಉತ್ತಮ ಬಜೆಟ್ ಕೊಟ್ಟಿದ್ದಾರೆ. ವಿಶೇಷವಾಗಿ ನೀರಾವರಿ, ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ.
ಇದೊಂದು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್. ಕ್ಯಾಬಿನೆಟ್‌ನಲ್ಲಿ ಚರ್ಚಿಸಿದಂತೆ ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ನೀಡಿದ್ದು, ಇದಕ್ಕೆ ಯಡಿಯೂರಪ್ಪಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.