ಬೆಳಗಾವಿ: ಸಚಿವ ಸ್ಥಾನದಿಂದ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಾರಕಿಹೊಳಿ ಬೆಂಬಲಿಗರು ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.
ರಮೇಶ್ ಜಾರಕಿಹೊಳಿ ತಲೆದಂಡ: ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಬೆಂಬಲಿಗರ ಯತ್ನ - Ramesh jarakiholi
ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆಗಲಿ. ಅವರ ರಾಜೀನಾಮೆ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಬೆಂಬಲಿಗರ ಯತ್ನ
ಗೋಕಾಕ್ ನಗರದ ಬಸವ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಸಿಎಂ ರಾಜೀನಾಮೆ ಅಂಗೀಕರಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಮೂವರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಆತ್ಮಹತ್ಯೆಗೆ ಯತ್ನಿಸಿದ ಮೂವರನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದರು.
ಇನ್ನು ರಮೇಶ್ ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಜಿಲ್ಲೆ ಬಂದ್ ಮಾಡಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಕೆಲವು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದರು.