ಕರ್ನಾಟಕ

karnataka

ETV Bharat / state

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ಪುನರಾಯ್ಕೆ: ಡಿಸಿಎಂ ಲಕ್ಷ್ಮಣ ಸವದಿ - Belagavi DCC Bank

ಎಲ್ಲಾ ನಿರ್ದೇಶಕರು ಹಾಗೂ ನೌಕರರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುವಂತೆ ನೂತನ ಪದಾಧಿಕಾರಿಗಳಿಗೆ ಸಲಹೆ ನೀಡಿದ್ದೇವೆ. ಜಿಲ್ಲೆಯ ರೈತರ ಏಳಿಗೆಗೆ ಡಿಸಿಸಿ ಬ್ಯಾಂಕ್ ಶ್ರಮಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು..

Ramesh Kathi
ರಮೇಶ್ ಕತ್ತಿ

By

Published : Nov 14, 2020, 1:26 PM IST

Updated : Nov 14, 2020, 9:20 PM IST

ಬೆಳಗಾವಿ :ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಪುನರಾಯ್ಕೆಯಾಗಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಿರ್ದೇಶಕರ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ನಿರ್ದೇಶಕರ ಸಲಹೆ ಪಡೆದುಕೊಂಡೇ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ ಢವಳೇಶ್ವರ ಅವರು ನಾಮಪತ್ರ ಸಲ್ಲಿಸಲಿದ್ದು, ಇಬ್ಬರ ಆಯ್ಕೆ ಅವಿರೋಧವಾಗಿರಲಿದೆ.

ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

ಎಲ್ಲಾ ನಿರ್ದೇಶಕರು ಹಾಗೂ ನೌಕರರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುವಂತೆ ನೂತನ ಪದಾಧಿಕಾರಿಗಳಿಗೆ ಸಲಹೆ ನೀಡಿದ್ದೇವೆ. ಜಿಲ್ಲೆಯ ರೈತರ ಏಳಿಗೆಗೆ ಡಿಸಿಸಿ ಬ್ಯಾಂಕ್ ಶ್ರಮಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಎಲ್ಲಾ ನಾಯಕರು ಸೇರಿಕೊಂಡು ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿದ್ದೇವೆ. ಅಪೆಕ್ಸ್​​ ಬ್ಯಾಂಕಿಗೂ ಸಹ ಯಾವುದೇ ಗೊಂದಲ ಆಗದಂತೆ ನೋಡಿಕೊಳ್ಳುತ್ತೇವೆ. ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿ ನಾಮನಿರ್ದೇಶನ ಮಾಡುತ್ತೇವೆ ಎಂದರು.

Last Updated : Nov 14, 2020, 9:20 PM IST

ABOUT THE AUTHOR

...view details