ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗೋಕಾಕ್ ನಗರದಲ್ಲಿ ಜಾರಕಿಹೊಳಿ ಬೆಂಬಲಿಗರು ಪ್ರತಿಭಟಿಸಿದರು.
ಓದಿ: ಸಂತ್ರಸ್ತೆ ಹೇಳಿಕೆ ನಂತರ ಗರಿಗೆದರಿದ ತನಿಖೆ, ಎಸ್ಐಟಿ ಅಧಿಕಾರಿಗಳ ಸಭೆ

ಬೆಳಗಾವಿ ಜಿಲ್ಲೆ ಗೋಕಾಕ್ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ಬೆಂಬಲಿಗರು ಬಳಿಕ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ರಮೇಶ್ ಜಾರಕಿಹೊಳಿ ಪರ ಘೋಷಣೆ ಕೂಗಿದ ಬೆಂಬಲಿಗರು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಾಣದಿಂದ ನಗರದಲ್ಲಿ ಕೆಲ ಹೊತ್ತು ಟ್ರಾಫಿಕ್ ಸಮಸ್ಯೆ ಎದುರಾಯಿತು.
ರಮೇಶ್ ಜಾರಕಿಹೊಳಿ ಅವರ ಗೃಹ ಕಚೇರಿಯಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ, ಅವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಮಾಡಲಾಗಿದೆ ಎಂದು ಬೆಂಬಲಿಗರು ದೂರಿದರು.
ರಮೇಶ್ ಜಾರಕಿಹೊಳಿ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಆ ಮೂಲಕ ಕ್ಷೇತ್ರದ ಮತದಾರರು ಹಾಗೂ ರಮೇಶ್ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಬಿಜೆಪಿ ಹೈಕಮಾಂಡ್ ನಾಯಕರನ್ನು ಆಗ್ರಹಿಸಿದರು.