ಬೆಳಗಾವಿ:ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿರುವ ನವಿಲುತೀರ್ಥ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ: ರಾಮದುರ್ಗ-ಸುರೇಬಾನ್ ಸೇತುವೆ ಮುಳುಗಡೆ - Belgaum Latest News
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿರುವ ನವಿಲುತೀರ್ಥ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ: ರಾಮದುರ್ಗ-ಸುರೇಬಾನ್ ಸೇತುವೆ ಮುಳುಗಡೆ
ನೀರಿನ ಪ್ರಮಾಣ ಹೆಚ್ಚಿದ ಹಿನ್ನಲೆ ರಾಮದುರ್ಗ-ಸುರೇಬಾನ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ಪರ್ಯಾಯ ಮಾರ್ಗದ ಮೂಲಕ ರಾಮದುರ್ಗ-ಸುರೇಬಾನಗೆ ಸಂಪರ್ಕಿಸಲಾಗುತ್ತಿದೆ. ನವಿಲುತೀರ್ಥ ಡ್ಯಾಂನಿಂದ ಹೊರಹರಿವು ಹೆಚ್ಚಳವಾದರೆ ಗ್ರಾಮಗಳಿಗೆ ನೀರು ನುಗ್ಗಬಹುದು ಎಂಬ ಭಯದಲ್ಲಿ ಜನರಿದ್ದಾರೆ.