ಬೆಳಗಾವಿ: ಕೊರೊನಾ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲಾ ಐದೂ ವರದಿಗಳು ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ. ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಐದೂ ಪ್ರಕರಣಗಳ ವರದಿ ನೆಗೆಟಿವ್: ಜಿಲ್ಲಾಧಿಕಾರಿ ಸ್ಪಷ್ಟನೆ - ಬೆಳಗಾವಿ ಜಿಲ್ಲೆಯ ಐದೂ ಪ್ರಕರಣಗಳ ವರದಿ ನೆಗೆಟಿವ್
ಬೆಳಗಾವಿಯ ಐದು ಜನರ ಗಂಟಲು ದ್ರವವನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ಈ ಐದು ಜನರ ವರದಿಗಳು ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ. ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲಾ ಐದು ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿದೆ. ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.