ಕರ್ನಾಟಕ

karnataka

ETV Bharat / state

ಕನಿಷ್ಠ ವೇತನಕ್ಕೆ ಆಗ್ರಹಿಸಿ ಗ್ರಂಥಪಾಲಕರಿಂದ ಡಿಸಿಗೆ ಮನವಿ - undefined

ಕನಿಷ್ಠ ವೇತನ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಗ್ರಂಥಪಾಲಕರು ಜಿಲ್ಲಾದಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸದಾನಂದ ಪೂಜಾರಿ

By

Published : Jul 3, 2019, 11:40 AM IST

ಬೆಳಗಾವಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಬೆಳಗಾವಿ ಜಿಲ್ಲಾ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಮತ್ತು ಗ್ರಂಥಪಾಲಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಗ್ರಂಥಪಾಲಕರು, ಸುಮಾರು ಮೂವತ್ತು ವರ್ಷಗಳಿಂದ ನಮ್ಮ ಬೇಡಿಕೆ ಈಡೇರಿಸುವಂತೆ ಅನೇಕ ಭಾರಿ ಪ್ರತಿಭಟನೆ, ಮನವಿ ಮಾಡಿಕೊಂಡರೂ ಸರ್ಕಾರ ನಮ್ಮ ಬಗ್ಗೆ ಕರುಣೆ ತೋರುತ್ತಿಲ್ಲ. ಆದ್ದರಿಂದ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಗ್ರಂಥಪಾಲಕರು

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಸದಾನಂದ ಪೂಜಾರಿ, ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಸುಮಾರು ಆರು ಸಾವಿರಕ್ಕೂ ಹೆಚ್ಚು ಗ್ರಂಥಪಾಲಕರು ಕಡಿಮೆ ಸಂಬಳದಲ್ಲಿ ದುಡಿಯುತ್ತಿದ್ದೇವೆ. ಸರ್ಕಾರದ ಯಾವುದೇ ಸೌಲಭ್ಯಗಳು ನಮಗೆ ಸಿಗುತ್ತಿಲ್ಲವಾದ್ದರಿಂದ ಕನಿಷ್ಠ ವೇತನ, ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಬೇಕು ಎಂದರು.

ಇತ್ತಿಚೆಗಷ್ಟೇ ಕನಿಷ್ಠ ವೇತನಕ್ಕೆ ಆಗ್ರಹಿಸಿ ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಬಳ್ಳಾಪುರದ ರೇವಣ್ಣಕುಮಾರ ಅವರಿಗೆ ತಕ್ಷಣ ಪರಿಹಾರ ನೀಡುವುದು ಸೇರಿದಂತೆ, ಹಲವಾರು ಬೇಡಿಕೆಗಳನ್ನು ತಕ್ಷಣವೇ ಜಾರಿ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

For All Latest Updates

TAGGED:

ABOUT THE AUTHOR

...view details