ಚಿಕ್ಕೋಡಿ:ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯಸಭಾ ಸದಸ್ಯರಾದ ಡಾ. ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ತೆರಳಿದ್ದ ನಿಯೋಗವು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಮನವಿ ಸಲ್ಲಿಸಿದೆ.
ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ಗೆ ಮನವಿ ಕೃಷ್ಣಾ ನದಿ ತೀರದ ಜನರು ನೀರಿಲ್ಲದೇ ಕಳೆದ ಒಂದು ತಿಂಗಳಿನಿಂದ ಪರದಾಡುತ್ತಿದ್ದು, ರೈತರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ನೀರಿಗಾಗಿ ಪರದಾಡಬೇಕಾಗಿದೆ.
ಸದ್ಯ ಉತ್ತರ ಕರ್ನಾಟಕ ಭಾಗದ ರೈತರು ನೀರಿಲ್ಲದೆ ಕಳೆದ ಒಂದು ತಿಂಗಳಿನಿಂದ ತೊಂದರೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಕೃಷ್ಣಾ ನದಿಗೆ ನೀರು ಬಿಡಬೇಕೆಂದು ಮಹಾ ಸಿಎಂಗೆ ಒತ್ತಾಯ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಬಾಗಲಕೋಟೆ ಸಂಸದ ಪಿ.ಸಿ ಗದ್ದಿಗೌಡರ, ವಿಧಾನ ಪರಿಷತ ಸದಸ್ಯರಾದ ಮಹಾಂತೇಶ ಕವಟಗಿಮಠ, ಶಾಸಕರಾದ ಪಿ.ರಾಜೀವ, ಶಶಿಕಲಾ ಜೊಲ್ಲೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.