ಬೆಳಗಾವಿ : ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಜಾಸ್ತಿಯಾಗಿದ್ದು, ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದೆ. ನೀರು ಬಿಡುವ ಮುನ್ನ ಸೂಚನೆ ನೀಡುವಂತೆ ಸಚಿವ ಲಕ್ಷ್ಮಣ ಸವದಿ ಒಳಗೊಂಡ ನಿಯೋಗ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ನೀರು ಬಿಡುವ ಮುನ್ನ ಸೂಚನೆ ನೀಡಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ : ಶಶಿಕಲಾ ಜೊಲ್ಲೆ - Shashikala Jolle
ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಅಧಿಕವಾಗಿದ್ದು, ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದೆ. ನೀರು ಬಿಡುವ ಮುನ್ನ ಸೂಚನೆ ನೀಡುವಂತೆ ಸಚಿವ ಲಕ್ಷ್ಮಣ ಸವದಿ ಒಳಗೊಂಡ ನಿಯೋಗ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಶಶಿಕಲಾ ಜೊಲ್ಲೆ
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯ ಆರ್ಭಟ ಜಾಸ್ತಿಯಾಗಿದೆ. ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಲಾಗಿದ್ದು, ಪ್ರವಾಹ ಉಂಟಾದರೆ ಜನರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.