5 ವರ್ಷದಿಂದ ಮನವಿ ಕೊಡ್ತಾನೆ ಇದೀವಿ.. ಹೇಳ್ರೀ, ಶುದ್ಧ ಕುಡಿಯೋ ನೀರು ಕೊಡ್ತೀರಿ ಯಾವಾಗ?
ಬೆಳಗಾವಿ ಜಿಲ್ಲೆಯ ಅತ್ತಿವಾಡ ಗ್ರಾಮದಲ್ಲಿ ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಸೇರಿ ಹಲವಾರು ಮೂಲಸೌಲಭ್ಯಗಳ ಕೊರತೆ ಇದ್ದು ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಬೆಳಗಾವಿ :ಜಿಲ್ಲೆಯ ಅತ್ತಿವಾಡ ಗ್ರಾಮದಲ್ಲಿ ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಸೇರಿ ಹಲವಾರು ಮೂಲಸೌಲಭ್ಯಗಳ ಕೊರತೆ ಇದ್ದು ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಮಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕರ್ನಾಟಕ-ಮಹಾರಾಷ್ಟ್ರದ ಗಡಿಭಾಗದ ಅತ್ತಿವಾಡ ಗ್ರಾಮದಲ್ಲಿ ಸುಮಾರು 3000ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಹಲವಾರು ಸಮಸ್ಯೆಗಳಿಂದ ಜನ ಬಳಲುತ್ತಿದ್ದಾರೆ. ಶುದ್ದ ಕುಡಿಯುವ ನೀರಿನ ಪೂರೈಕೆ ಇಲ್ಲದಿರುವುದರಿಂದ ವಾಂತಿ, ಬೇಧಿ ಹಾಗೂ ಕಾಮಾಲೆ ಮತ್ತು ಇನ್ನಿತರ ಮಾರಣಾಂತಿಕ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದಷ್ಟು ಬೇಗ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.