ಚಿಕ್ಕೋಡಿ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಗುರುತಿಸಿ ಎಂದು ಚಿಕ್ಕೋಡಿಯಲ್ಲಿ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ರಾಯಣ್ಣನ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಗುರುತಿಸುವಂತೆ ಮನವಿ - chikkodi belgavi latest news
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಗುರುತಿಸಿ ಎಂದು ಚಿಕ್ಕೋಡಿಯಲ್ಲಿ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ರಾಯಣ್ಣನ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಗುರುತಿಸುವಂತೆ ಮನವಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಎಸಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಕಾರ್ಯಕರ್ತರು, ರಾಜಕೀಯ ಲಾಭಕ್ಕೆ ರಾಯಣ್ಣನನ್ನು ಸೀಮಿತಗೊಳಿಸಬೇಡಿ. ಕೆಚ್ಚೆದೆಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ದೇಶಕ್ಕಾಗಿ ಪ್ರಾಣ ತೆತ್ತದ್ದನ್ನು ಇನ್ನಾದರು ಗುರುತಿಸಿ ಬೆಳಗಾವಿ ಜಿಲ್ಲೆಯ ನಂದಗಡ ಗ್ರಾಮದಲ್ಲಿರುವ ರಾಯಣ್ಣ ಸಮಾಧಿಯನ್ನು ಅಭಿವೃದ್ಧಿಪಡಿಸಿ. ಆದಷ್ಟು ಶೀಘ್ರದಲ್ಲಿ ಸಂಗೊಳ್ಳಿ ರಾಯಣ್ಣನ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಗುರುತಿಸಿ ಎಂದು ಮನವಿ ಸಲ್ಲಿಸಿದರು.