ಬೆಳಗಾವಿ : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಜನ ಸೇವಕ ಸಮಾವೇಶ ರದ್ದುಪಡಿಸುವಂತೆ ಆಗ್ರಹಿಸಿ ಮಾಹಿತಿ ಹಕ್ಕು ಕಾರ್ಯರ್ತ ಭೀಮಪ್ಪ ಗಡಾದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜನ ಸೇವಕ ಸಮಾವೇಶ ರದ್ದುಪಡಿಸುವಂತೆ ಆಗ್ರಹ : ಬೆಳಗಾವಿಯಲ್ಲಿ ಪ್ರತಿಭಟನೆ
ಕೋವಿಡ್-19 ಹಿನ್ನೆಲೆಯಲ್ಲಿ ಸಮಾವೇಶ ರದ್ದುಪಡಿಸಬೇಕೆಂದು ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಆದ್ರೆ, ಈವರೆಗೂ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಸಮಾವೇಶ ಪರವಾನಿಗೆ ನೀಡಿರುವ ಕುರಿತು ಮಾಹಿತಿ ಕೇಳಿದರೆ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರು ಸರಿಯಾದ ಉತ್ತರ ಕೊಡುತ್ತಿಲ್ಲ. ಯಾವುದೇ ಪರವಾನಿಗೆ ಪಡೆಯದೇ ಸಮಾವೇಶ ನಡೆಸಲು ಮುಂದಾಗಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದರು.
ಈ ವೇಳೆ ಮಾತನಾಡಿದ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ, ಕೋವಿಡ್-19 ಹಿನ್ನೆಲೆಯಲ್ಲಿ ಸಮಾವೇಶ ರದ್ದುಪಡಿಸಬೇಕೆಂದು ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಆದ್ರೆ, ಈವರೆಗೂ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಸಮಾವೇಶಕ್ಕೆ ಪರವಾನಿಗೆ ನೀಡಿರುವ ಕುರಿತು ಮಾಹಿತಿ ಕೇಳಿದರೆ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರು ಸರಿಯಾದ ಉತ್ತರ ಕೊಡುತ್ತಿಲ್ಲ. ಯಾವುದೇ ಪರವಾನಿಗೆ ಪಡೆಯದೇ ಸಮಾವೇಶ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಕೋವಿಡ್-19 ಮಾರ್ಗಸೂಚಿ ಪ್ರಕಾರ ವ್ಯಕ್ತಿಯಿಂದ ವ್ಯಕ್ತಿಗೆ ಐದು ಅಡಿ ಅಂತರ ಕಾಪಾಡಿಕೊಳ್ಳಬೇಕು. ಆದರೆ ಬಿಜೆಪಿಯವರು 2 ರಿಂದ 3 ಲಕ್ಷ ಜನರನ್ನು ಸೇರಿಸುವುದಾಗಿ ಹೇಳಿದ್ದಾರೆ. ಇದರಿಂದ ಸಾಮಾಜಿಕ ಅಂತರ ಕಾಪಾಡಲು ಸಾಧ್ಯವಿಲ್ಲ. ಸಾಮಾನ್ಯ ಜನರಿಗೆ ಮಾಸ್ಕ್ ಹಾಕದಿದ್ದರೆ ದಂಡ ಹಾಕುತ್ತಾರೆ. ಆದರೆ ಯಾವುದೇ ಸಚಿವರು ಮಾಸ್ಕ್ ಧರಿಸುತ್ತಿಲ್ಲ. ಅವರಿಗೊಂದು ಕಾನೂನು, ಜನ ಸಾಮಾನ್ಯರಿಗೊಂದು ಕಾನೂನಾ ಎಂದು ಪ್ರಶ್ನಿಸಿದರು. ಕಾನೂನು ಕಾಪಾಡಬೇಕಾದವರೇ ಉಲ್ಲಂಘನೆ ಮಾಡುತ್ತಿದ್ದಾರೆ. ಸಮಾವೇಶವನ್ನು ರದ್ದು ಪಡಿಸಬೇಕು. ಇಲ್ಲದಿದ್ದರೆ ಸಮಾವೇಶದ ವೇದಿಕೆಯಲ್ಲಿರುವವರು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಕೇಸ್ ದಾಖಲಿಸಲಾಗುವುದು. ಸಮಾವೇಶ ದೃಶ್ಯಾವಳಿಗಳನ್ನು ಸಂಗ್ರಹಿಸಿಕೊಂಡು ಸಾಕ್ಷಿಯೊಂದಿಗೆ ಕೇಸ್ ದಾಖಲಿಸಿ, ವೇದಿಕೆ ಹಂಚಿಕೊಳ್ಳುವವರನ್ನು ನ್ಯಾಯಾಲಯದಲ್ಲಿ ಕೈಮುಗಿದು ನಿಲ್ಲುವಂತೆ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.