ಕರ್ನಾಟಕ

karnataka

ETV Bharat / state

ಕೃಷ್ಣೆಯ ರೌದ್ರಾವತಾರ: ಯಡೂರಿನ ವೀರಭದ್ರೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೃಷ್ಣಾ ನದಿಯ ನೀರಿನ ಮಟ್ಟ ಏರುತ್ತಿದ್ದು, ಗಡಿ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ಕೃಷ್ಣಾನ ರೌದ್ರಾವತಾರ:ಯಡೂರಿನ ವೀರಭದ್ರೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

By

Published : Aug 5, 2019, 9:13 AM IST

ಚಿಕ್ಕೋಡಿ:ಮಹಾರಾಷ್ಟ್ರದಲ್ಲಿ ಮುಂದುವರೆದ ಭಾರಿ ಮಳೆ ಹಿನ್ನೆಲೆ ಕೃಷ್ಣಾ ನದಿಯು ಅಪಾಯದ ಮಟ್ಟ ತಲುಪಿದ್ದು, ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ವೀರಭದ್ರೇಶ್ವರ ದೇವಸ್ಥಾನಕ್ಕೆ ನೀರು ನುಗ್ಗಿದೆ.

ಯಡೂರಿನ ವೀರಭದ್ರೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದಲ್ಲಿರುವ ವೀರಭದ್ರೇಶ್ವರ ದೇವಸ್ಥಾನಕ್ಕೆ ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಭಕ್ತರಿಗೆ ಈ ಪ್ರವಾಹದಿಂದ ಆತಂಕ ಉಂಟಾಗಿದ್ದು, ಶ್ರಾವಣ ಮಾಸಕ್ಕೆ ದೇವರ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಕೆ ಕಂಡುಬದಿಂದೆ.

ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ನಿರಾಸೆಯಾಗಿದ್ದು, ಶ್ರಾವಣ ಸೋಮವಾರ ಇರುವುದರಿಂದ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದರು. ಬರೋಬ್ಬರಿ 14 ವರ್ಷದ ನಂತರ ದೇವಸ್ಥಾನಕ್ಕೆ ನೀರು ನುಗ್ಗಿದೆ.2005-06ರ ಪ್ರವಾಹದಲ್ಲಿ ಈ ದೇವಸ್ಥಾನ ಜಲಾವೃತಗೊಂಡಿತ್ತು. ಕೃಷ್ಣಾ ನದಿಯ ನೀರಿನ ಮಟ್ಟ ಏರುತ್ತಿದ್ದು, ಗಡಿ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ABOUT THE AUTHOR

...view details