ಟ್ರಾಫಿಕ್ ಪೊಲೀಸರ ಕಿರುಕುಳ ತಪ್ಪಿಸುವಂತೆ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ - ಟ್ರಾಫಿಕ್ ಪೊಲೀಸರು
ಬೆಳಗಾವಿಯ ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ತರಕಾರಿ ಮತ್ತು ಹಣ್ಣಿನ ವ್ಯಾಪಾರಿಗಳಿಗೆ ಟ್ರಾಫಿಕ್ ಪೊಲೀಸರು ರಸ್ತೆಬದಿ ವ್ಯಾಪಾರ ಮಾಡದಂತೆ ದಿನನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ.

ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ
ಬೆಳಗಾವಿ:ಟ್ರಾಫಿಕ್ ಪೊಲೀಸರ ಕಿರುಕುಳ ತಪ್ಪಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.
ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ
ಟ್ರಾಫಿಕ್ ಪೊಲೀಸರು ಜಿಲ್ಲಾಧಿಕಾರಿಗಳ ಅನುಮತಿ ಪಡೆದುಕೊಂಡು ವಹಿವಾಟು ಮಾಡುವಂತೆ ಹೇಳುತ್ತಿದ್ದಾರೆ. ಆದ್ರೆ, ನಾವು ಈಗಾಗಲೇ ಮಹಾನಗರ ಪಾಲಿಕೆ ನೀಡುವ ಗುರುತಿನ ಚೀಟಿ ಪಡೆದುಕೊಂಡು ವ್ಯಾಪಾರ ಮಾಡುತ್ತಿದ್ದರೂ ನಮಗೆ ಪ್ರತಿ ದಿನವೂ ಪೊಲೀಸರು ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.ಜಿಲ್ಲಾಡಳಿತ ನಮಗೆ ತರಕಾರಿ ವ್ಯಾಪಾರ ಮಾಡಲು ಅವಕಾಶ ನೀಡಬೇಕು. ಇಂಥ ಸಂಕಷ್ಟದ ಸಮಯದಲ್ಲಿ ತರಕಾರಿ ವ್ಯಾಪಾರ ಮಾಡದಿದ್ರೆ ಕುಟುಂಬ ನಿರ್ವಹಣೆ ಕಷ್ಟವಾಗಲಿದೆ. ಹೀಗಾಗಿ ಬೀದಿಬದಿ ತರಕಾರಿ ವ್ಯಾಪಾರ ಮಾಡಲು ಅವಕಾಶ ನೀಡಬೇಕೆಂದು ಡಿಸಿಗೆ ಒತ್ತಾಯಿಸಿದರು.