ಕರ್ನಾಟಕ

karnataka

ETV Bharat / state

ವ್ಯಕ್ತಿಯ ಕೈಲಿದ್ದ ಹಣದ ಬ್ಯಾಗ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು! - ಬೆಳಗಾವಿ ಲೇಟೆಸ್ಟ್​ ನ್ಯೂಸ್

ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ವ್ಯಕ್ತಿಯೊಬ್ಬರು ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದ ವೇಳೆ ಬೈಕ್​ನಲ್ಲಿ ವೇಗವಾಗಿ ಬಂದ ದುಷ್ಕರ್ಮಿಗಳು, ಕೈಲಿದ್ದ ಹಣದ ಬ್ಯಾಗ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ.

robbers-snatched-money-in-chikkodi
ವ್ಯಕ್ತಿಯ ಕೈಲಿದ್ದ ಹಣದ ಬ್ಯಾಗ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು!

By

Published : Jan 30, 2021, 1:46 PM IST

ಚಿಕ್ಕೋಡಿ (ಬೆಳಗಾವಿ):ಬ್ಯಾಂಕ್​ನಿಂದ ಹಣ ತೆಗೆದುಕೊಂಡು ಬರುತ್ತಿದ್ದ ವ್ಯಕ್ತಿಯ ಕೈಲಿದ್ದ ಬ್ಯಾಗ್​ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಹೋಗಿರುವ ಘಟನೆ ಚಿಕ್ಕೋಡಿ ಪಟ್ಟಣದ ಬಸವೇಶ್ವರ ಸರ್ಕಲ್​ನಲ್ಲಿ ನಡೆದಿದೆ.

ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಸತ್ಯಪ್ಪ ದೇವಪ್ಪ ಖೋತ ಎಂಬುವವರು ಶುಕ್ರವಾರ ಮಧ್ಯಾಹ್ನ ಸೋಮವಾರ ಪೇಠದಲ್ಲಿರುವ ಸ್ಟೇಟ್ ಬ್ಯಾಂಕ್​ನಿಂದ 5 ಲಕ್ಷ ರೂ. ಡ್ರಾ ಮಾಡಿಕೊಂಡು ಬಸವ ಸರ್ಕಲ್​ ಬಳಿ ಹೋಗುತ್ತಿದ್ದರು. ಈ ವೇಳೆ, ಬೈಕ್​ನಲ್ಲಿ ವೇಗವಾಗಿ ಬಂದ ದುಷ್ಕರ್ಮಿಗಳು, ಸತ್ಯಪ್ಪನ ಕೈಲಿದ್ದ ಹಣದ ಬ್ಯಾಗ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಸತ್ಯಪ್ಪ ಕಬ್ಬೂರು ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಸಪಾಯಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತರಾಗಿದ್ದು, ನಿವೃತ್ತಿ ಹಣ ತೆಗೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಈ ಕುರಿತು ಚಿಕ್ಕೋಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details