ಬೆಳಗಾವಿ: ಬರ್ತಡೇ ಪಾರ್ಟಿ ಮುಗಿಸಿ ಮನೆಗೆ ತೆರಳುತ್ತಿದ್ದ ರೌಡಿಯನ್ನು ಗುಂಪೊಂದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಗ್ಯಾಂಗ್ ವಾಡಿಯಲ್ಲಿ ನಡೆದಿದೆ.
ಶಹಬಾಜ್ ಪಠಾಣ್ ಹತ್ಯೆಗೊಳಗಾದ ವ್ಯಕ್ತಿ. ಶಹಬಾಜ್ ಬರ್ತಡೇ ಪಾರ್ಟಿಗೆ ಹೋಗಿರುವುದನ್ನು ದುಷ್ಕರ್ಮಿಗಳು ಖಚಿತಪಡಿಸಿಕೊಂಡಿದ್ದಾರೆ. ಪಾರ್ಟಿ ಮುಗಿಸಿ ಹೊರಬರುತ್ತಿದ್ದಂತೆ ಆತನನ್ನು ಹಿಂಬಾಲಿಸಿದ್ದಾರೆ. ನಿರ್ಜನ ಪ್ರದೇಶದಲ್ಲಿ ಮಾರಕಾಸ್ತ್ರಗಳಿಂದ ದಾಳಿಗೆ ಮುಂದಾಗಿದ್ದು, ಆಗ ಶಹಬಾಜ್ ಬೈಕ್ ಬಿಟ್ಟು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೂ ಬೆನ್ನು ಬಿಡದ ದುಷ್ಕರ್ಮಿಗಳು ಶಹಬಾಜ್ನನ್ನು ಬರ್ಬರವಾಗಿ ಕೊಚ್ಚಿ ಕೊಂದಿದ್ದಾರೆ. ಕೈಯನ್ನು ಕತ್ತರಿಸಿ ಎರಡು ಭಾಗ ಮಾಡಲಾಗಿದೆ. ಕುತ್ತಿಗೆಗೆ ಮಚ್ಚಿನಿಂದ ಹೊಡೆಯಲಾಗಿದೆ.