ಬೆಳಗಾವಿ: ಬೆಳಗಾವಿ ನಗರದಲ್ಲಿ 24/7 ಕುಡಿಯುವ ನೀರಿನ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ ಆಂಡ್ ಟಿ ಕಂಪನಿಗೆ 21 ಕೋಟಿ ರೂ. ದಂಡ ವಿಧಿಸುವಂತೆ ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಅಭಿವೃದ್ಧಿ ನಿಗಮಕ್ಕೆ(ಕೆಯುಐಡಿಎಫ್ ಸಿ) ನೋಟಿಸ್ ಜಾರಿ ಮಾಡಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರದಲ್ಲಿ 24/7 ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಕ್ಕೆ ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಅಭಿವೃದ್ಧಿ ನಿಗಮ(ಕೆಯುಐಡಿಎಫ್ ಸಿ) ಎಲ್ ಆಂಡ್ ಟಿ ಕಂಪನಿಗೆ ಟೆಂಡರ್ ನೀಡಿತ್ತು. ಕಾಮಗಾರಿ ಪೂರ್ಣಗೊಳಿಸಲು ಅವರಿಗೆ ಐದು ವರ್ಷದ ಅವಧಿ ನೀಡಲಾಗಿತ್ತು. 2025ರ ಜೂನ್ 15ಕ್ಕೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಇಲ್ಲಿಯವರೆಗೆ ಶೇ.60ರಷ್ಟು ಕಾಮಗಾರಿ ಪೂರ್ಣವಾಗಬೇಕಿತ್ತು. ಆದರೆ, ಆಗಿದ್ದು ಮಾತ್ರ ಶೇ.35-36ರಷ್ಟು. ಹಾಗಾಗಿ ಕಂಪೆನಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.