ಕರ್ನಾಟಕ

karnataka

ETV Bharat / state

ಜನರ ಸೇವೆ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಉತ್ತಮ: ಸಚಿವ ಈಶ್ವರಪ್ಪ - ಗ್ರಾಮೀಣಾಭಿವೃದ್ಧಿ ಇಲಾಖೆ

ಬೆಳಗಾವಿಯಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗಳ‌ ಸೇವೆ ಮಾಡಲು ಗ್ರಾಮೀಣಾಭಿವೃದ್ಧಿಯಂತಹ ಇಲಾಖೆ ದೇವರು ಕೊಟ್ಟ ಕೊಡುಗೆ. ಎಲ್ಲರೂ ‌ಪ್ರಾಮಾಣಿಕವಾಗಿ ಜನರ ಸೇವೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ‌.ಎಸ್.ಈಶ್ವರಪ್ಪ ಹೇಳಿದರು.

ಕೆ.ಎಸ್ ಈಶ್ವರಪ್ಪ

By

Published : Sep 8, 2019, 7:32 PM IST

ಬೆಳಗಾವಿ: ಸಮಾಜದ ಕಟ್ಟಕಡೆಯ ವ್ಯಕ್ತಿಗಳ‌ ಸೇವೆ ಮಾಡಲು ಗ್ರಾಮೀಣಾಭಿವೃದ್ಧಿಯಂತಹ ಇಲಾಖೆ ದೇವರು ಕೊಟ್ಟ ಕೊಡುಗೆ. ಎಲ್ಲರೂ ‌ಪ್ರಾಮಾಣಿಕವಾಗಿ ಜನರ ಸೇವೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ‌.ಎಸ್.ಈಶ್ವರಪ್ಪ ಹೇಳಿದರು.

ಸಚಿವ ಈಶ್ವರಪ್ಪ

ನಗರದ ಸುವರ್ಣಸೌಧ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸ್ಥಾಯಿ ಸಮಿತಿ ಸಮಾಲೋಚನೆ, ಪ್ರಗತಿ ಪರಿಶೀಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಈಶ್ವರಪ್ಪ, ರಾಜ್ಯದಲ್ಲಿ 90ರಷ್ಟು ಶೌಚಾಲಯ ನಿರ್ಮಾಣ ಮಾಡಲಾಗಿದೆ. ಅದು ಪೂರ್ಣವಾಗಬೇಕಿದೆ‌ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಹಳ್ಳಿಗಳ ಅಭಿವೃದ್ಧಿಗಾಗಿ ಸಿಇಒಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಭೇಟಿ ನೀಡಿ ಸಮಸ್ಯೆಗಳ ಪರಿಶೀಲನೆ ಮಾಡಲಾಗಿದೆ. ಎಲ್ಲರೂ ಭ್ರಷ್ಟಾಚಾರಿಗಳಂತ ಹೇಳೋದಿಲ್ಲ. ಅಲಲ್ಲಿ ಮಾಡುವ ಕಳ್ಳತನ ಸಮಾಜವನ್ನು ಹಾಳು ಮಾಡುತ್ತಿದೆ. ಹಾಗಾಗಿ ಸಿಇಒ ಆದ ನೀವೇ ಸರಿಯಾಗಿ ಶ್ರಮಿಸಬೇಕಾಗಿದೆ ಎಂದರು.

ABOUT THE AUTHOR

...view details