ಚಿಕ್ಕೋಡಿ :ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವೇಳೆ ಆತನನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆಗೆ ದಾಖಲಿಸಿ ಸದಲಗಾ ಪಿಎಸ್ಐ ಆರ್.ವೈ ಬೀಳಗಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತಕ್ಕೊಳಗಾದ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ ಸದಲಗಾ ಪಿಎಸ್ಐ - injured in accident
ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವೇಳೆ ಆತನನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆಗೆ ದಾಖಲಿಸಿ ಸದಲಗಾ ಪಿಎಸ್ಐ ಆರ್.ವೈ ಬೀಳಗಿ ಮಾನವೀಯತೆ ಮೆರೆದಿದ್ದಾರೆ.
![ಅಪಘಾತಕ್ಕೊಳಗಾದ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ ಸದಲಗಾ ಪಿಎಸ್ಐ ಸದಲಗಾ ಪಿಎಸ್ಐ](https://etvbharatimages.akamaized.net/etvbharat/prod-images/768-512-9074172-631-9074172-1601993288886.jpg)
ಸದಲಗಾ ಪಿಎಸ್ಐ
ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ ಸದಲಗಾ ಪಿಎಸ್ಐ
ತಾಲ್ಲೂಕಿನ ಸದಲಗಾ ಪಟ್ಟಣದ ಗಣಪತಿ ಮಂದಿರ ಬಳಿ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ರಸ್ತೆ ಮೇಲೆ ಬಿದ್ದು ನರಳಾಡುತ್ತಿದ್ದ. ಈ ವೇಳೆ ಆ್ಯಂಬುಲೆನ್ಸ್ ಬರುವುದು ತಡವಾದ ಕಾರಣ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಪಿಎಸ್ಐ ಬೀಳಗಿ ಬೈಕ್ ಸವಾರನನ್ನು ತಮ್ಮ ವಾಹನದಲ್ಲಿ ಕೂಡಿಸಿಕೊಂಡು ಸದಲಗಾ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.
Last Updated : Oct 6, 2020, 8:16 PM IST