ಕರ್ನಾಟಕ

karnataka

ETV Bharat / state

ಮಹಿಳಾ ಮತದಾರರನ್ನು ಆಕರ್ಷಿಸಲು ಬೆಳಗಾವಿಯಲ್ಲಿ ಸಖಿ ಮತಗಟ್ಟೆ - ಗೋಕಾಕ್ ಉಪಚುನಾವಣೆ ಸುದ್ದಿ

ನಾಳೆ ರಾಜ್ಯದ 13 ಕೆಲ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಗೋಕಾಕ್​ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಕೊಣ್ಣೂರಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 73 ರಲ್ಲಿ ಸಖಿ ಮತಗಟ್ಟೆ ಸ್ಥಾಪಿಸಲಾಗಿದೆ.

Sakhi booth, ಸಖಿ ಮತಗಟ್ಟೆ
ಸಖಿ ಮತಗಟ್ಟೆ

By

Published : Dec 4, 2019, 9:40 PM IST

ಬೆಳಗಾವಿ: ಗೋಕಾಕ್​ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಕೊಣ್ಣೂರಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 73 ರಲ್ಲಿ ಸಖಿ ಮತಗಟ್ಟೆ ಸ್ಥಾಪಿಸಲಾಗಿದೆ.

ಚಿಕ್ಕಮಕ್ಕಳ ಆಟದ ಕೊಠಡಿ

ಈ ಸಖಿ ಮತಗಟ್ಟೆಯನ್ನು ವಿಶೇಷವಾಗಿ ಅಲಂಕಾರಗೊಳಿಸಲಾಗಿದೆ. ಮಹಿಳಾ ಮತದಾರರ ಜತೆಗೆ ಆಗಮಿಸುವ ಮಕ್ಕಳಿಗಾಗಿ ಶಾಲಾ ಆವರಣದಲ್ಲಿ ಚಿಕ್ಕಮಕ್ಕಳ ಆಟದ ಕೊಠಡಿ ಕೂಡ ನಿರ್ಮಿಸಲಾಗಿದ್ದು, ಆಟಿಕೆ ಸಾಮಾನುಗಳನ್ನು ಕಲ್ಪಿಸಲಾಗಿದೆ. ಅದೇ ರೀತಿ ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗೆ ಗಾಲಿಕುರ್ಚಿ ಸೌಲಭ್ಯಗಳನ್ನು ಒದಗಿಸಲಾಗಿದೆ.

ಸಖಿ ಮತಗಟ್ಟೆಗಳಲ್ಲಿ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯಾಗಿ ಮಹಿಳೆಯರೇ ಕಾರ್ಯನಿರ್ವಹಿಸಲಿರುವುದು ವಿಶೇಷ. ಜಿಲ್ಲೆಯಲ್ಲಿ ಉಪ ಚುನಾವಣೆ ನಡೆಯುತ್ತಿರುವ ಮೂರು ಮತ ಕ್ಷೇತ್ರದಲ್ಲಿ ತಲಾ ಒಂದೊಂದು ಸಖಿ ಮತಗಟ್ಟೆಯನ್ನು ಸ್ಥಾಪಿಸಲಾಗಿರುತ್ತದೆ.

ABOUT THE AUTHOR

...view details