ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಮರುಸ್ಥಾಪನೆಗೆ, ಆಕ್ಷೇಪ ವ್ಯಕ್ತಪಡಿಸುವ ಮೂಲಕ ಎಂಇಎಸ್ ಕಿರಿಕ್ ಮಾಡ್ತಿದೆ. ವಿವಾದದ ಬಳಿಕ ದಿಢೀರ್ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಜೊತೆಗೆ ಜಿಲ್ಲಾಧಿಕಾರಿ ತುರ್ತು ಸಭೆ ನಡೆಸಿದರು.
ಪೀರನವಾಡಿಯಲ್ಲಿ ರಾಯಣ್ಣ ಪುತ್ಥಳಿ ತೆರವಿಗೆ ಪಟ್ಟು: ಎಂಇಎಸ್ - ಶಿವಸೇನೆ ಕಾರ್ಯಕರ್ತರ ಜೊತೆ ಡಿಸಿ ಸಭೆ - Sangolli Rayanna statue issue
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿವಾದ ಕುರಿತಾಗಿ, ದಿಢೀರ್ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಜೊತೆಗೆ ಜಿಲ್ಲಾಧಿಕಾರಿ ತುರ್ತು ಸಭೆ ನಡೆಸಿದರು.
ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಜೊತೆಗೆ ಜಿಲ್ಲಾಧಿಕಾರಿ ಸಭೆ
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ತೊರವುಗೊಳಿಸಬೇಕು. ಇಲ್ಲವಾದ್ರೆ ಮೂರ್ತಿಯನ್ನು ಮುಚ್ಚಬೇಕು ಎಂದು ಎಂಇಎಸ್ ಕಾರ್ಯಕರ್ತರು ಪಟ್ಟು ಹಿಡಿದರು. ಎಂಇಎಸ್ ಕಾರ್ಯಕರ್ತರಿಗೆ ಶಿವಸೇನೆ ಕಾರ್ಯಕರ್ತರು ಧ್ವನಿಗೂಡಿಸಿದರು.
ಸ್ಥಳೀಯರ ಸಭೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಡಿಸಿ ಭರವಸೆ ನೀಡಿದರು. ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಸಭೆಯನ್ನು ಮೊಟಕುಗೊಳಿಸಲಾಯಿತು.