ಚಿಕ್ಕೋಡಿ: ಒಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟ ಹಿನ್ನೆಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣವನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ.
ಕೊರೊನಾ ಕಟ್ಟೆಚ್ಚರ: ಸಂಕೇಶ್ವರ ಪಟ್ಟಣ ಸೀಲ್‌ಡೌನ್ - ಸಂಕೇಶ್ವರ ಪಟ್ಟಣವನ್ನು ಸಂಪೂರ್ಣ ಸೀಲ್‌ಡೌನ್
ಸಂಕೇಶ್ವರ ಪಟ್ಟಣದಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಪಟ್ಟಣವನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಂಪೂರ್ಣವಾಗಿ ಸೀಲ್‌ಡೌನ್ ಮಾಡಲಾಗಿದೆ.
ಸಂಕೇಶ್ವರ ಪಟ್ಟಣ ಸಂಪೂರ್ಣ ಸೀಲ್‌ಡೌನ್
ಸಂಕೇಶ್ವರ ಪಟ್ಟಣದ ಸುತ್ತ 3 ಕಿ.ಮೀ. ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದು, ಮನೆಯಿಂದ ಯಾರೂ ಹೊರ ಬರದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಪಟ್ಟಣದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಆರೋಗ್ಯ ಇಲಾಖೆಯಿಂದ ಪಟ್ಟಣದ ಮನೆ ಮನೆಗೆ ತೆರಳಿ ಹೆಲ್ತ್ ಸರ್ವೆ ನಡೆಸಲಾಗಿದೆ.
ಪಟ್ಟಣದ ಪ್ರತಿ ಗಲ್ಲಿಯಲ್ಲೂ ಔಷಧ ಸಿಂಪಡಣೆ ಮಾಡಲಾಗುತ್ತಿದೆ. ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 15 ಜನರಿಗೆ ಸಂಕೇಶ್ವರ ಪಟ್ಟಣದಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ.