ನಿಪ್ಪಾಣಿ:ಕ್ಷೇತ್ರದ ಪ್ರಪ್ರಥಮ ಶಾಸಕಿ ಎಂಬ ಇತಿಹಾಸ ಸೃಷ್ಟಿಸಿದ್ದ ಶಶಿಕಲಾ ಜೊಲ್ಲೆ ಇದೀಗ ಅಲ್ಲಿನ ಮೊದಲ ಸಚಿವೆ ಎಂಬ ದಾಖಲೆಯನ್ನೂ ಬರೆದಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಆಯ್ಕೆಯಾದ ಶಶಿಕಲಾ ಜೊಲ್ಲೆ ಬಿಜೆಪಿಯಿಂದ ನೇರವಾಗಿ ವಿಧಾನಸಭಾ ಚುನಾವಣಾ ಕಣಕ್ಕಿಳಿದಿದ್ದ ಅವರು ಮೊದಲ ಪ್ರಯತ್ನದಲ್ಲೇ ಸೋಲು ಅನುಭವಿಸಿದ್ದರು. ಆದರೆ ಧೈರ್ಯಗೆಡದೆ ಸಮಾಜಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಾಕಾಸಾಹೇಬ ಪಾಟೀಲ್ ವಿರುದ್ಧ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು.
ಗಡಿ ಪ್ರದೇಶವಾದ ಅಲ್ಲಿನ ಕನ್ನಡ ಹಾಗೂ ಮರಾಠಿ ಭಾಷಿಕರಿಬ್ಬರ ಬೆಂಬಲಗಳಿಸಿ 2018ರ ಚುನಾವಣೆಯಲ್ಲೂ ವಿಜೇತರಾಗಿ 2ನೇ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ನಿಪ್ಪಾಣಿಯಲ್ಲಿ ಕಮಲ ಅರಳಿಸಿದ ಖ್ಯಾತಿ ಶಶಿಕಲಾ ಜೊಲ್ಲೆ ಅವರಿಗೆ ಸಲ್ಲುತ್ತದೆ.