ಬೆಳಗಾವಿ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಮಸೂದೆಗಳನ್ನು ಜಾರಿಗೊಳಿಸಿವೆ. ಹೀಗಾಗಿ, ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ದೇಶದೆಲ್ಲೆಡೆ ದೊಡ್ಡ ಆಂದೋಲನವೇ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಬಿಜೆಪಿ ವಿರುದ್ಧ ದೇಶದೆಲ್ಲೆಡೆ ದೊಡ್ಡ ಆಂದೋಲನ ನಡೆಯುತ್ತಿದೆ: ಸತೀಶ್ ಜಾರಕಿಹೊಳಿ - ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ
ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಬೃಹತ್ ಆಂದೋಲನ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸರ್ಕಾರದ ರೈತ ವಿರೋಧಿ ಮಸೂದೆಗಳ ವಿರುದ್ಧ ದೇಶದೆಲ್ಲೆಡೆ ದೊಡ್ಡ ಆಂದೋಲನ ನಡೆಯುತ್ತಿದೆ. ನಾವು ಕೂಡ ರೈತರ ಜೊತೆಗಿದ್ದೇವೆ ಎಂದರು.
ಮಹಾಮಾರಿ ಕೊರೊನಾ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರಗಳು ವಿಫಲವಾಗಿವೆ. ಸಮರ್ಪಕ ಕೆಲಸ ಎರಡೂ ಸರ್ಕಾರಗಳಿಂದ ಆಗುತ್ತಿಲ್ಲ. ಈ ಬಗ್ಗೆ ಹಲವು ಸಲ ಸರ್ಕಾರದ ಗಮನ ಸೆಳೆದಿದ್ದೇವೆ. ದೇಶದಲ್ಲಿ ಕೊರೊನಾ ಕೈಮೀರಿ ಹೋಗುತ್ತಿದೆ. ಇನ್ನಾದರೂ ಸರ್ಕಾರ ಜಾಗೃತಗೊಳ್ಳಬೇಕು ಎಂದು ಆಗ್ರಹಿಸಿದರು.