ಬೆಳಗಾವಿ: ಕಾಂಗ್ರೆಸ್ ಪಕ್ಷದವರಿಗೆ ಬದಲಾವಣೆ ಆಗೋದಕ್ಕೆ, ಪಕ್ಷ ಸಂಘಟನೆ ಮಾಡುವುದಕ್ಕೆ ಇದೊಂದು ಸೋಲು ಪಾಠವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಎಲ್ಲೆಡೆ ಕಾಂಗ್ರೆಸ್ ಮುಕ್ತ ಕರ್ನಾಟಕವಾಗಲಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅದು ಅವರು ಕಾಣುತ್ತಿರುವ ಹಗಲುಕನಸು. ಎಂದೆಂದಿಗೂ ಕಾಂಗ್ರೆಸ್ ಮುಕ್ತ ಮಾಡಲು ಅವರಿಂದ ಸಾಧ್ಯವಿಲ್ಲ. ಗೋವಾದಲ್ಲಿ ಮತಗಳು ವಿಭಜನೆಯಾಗಿದ್ದರಿಂದ ನಮ್ಮ ಪಕ್ಷಕ್ಕೆ ತೊಂದರೆಯಾಗಿದೆಯೇ ವಿನಃ ಯಾವ ದೊಡ್ಡ ಮಟ್ಟದಲ್ಲಿ ನಾವೇನು ಸೋತಿಲ್ಲ ಎಂದರು.