ಬೆಳಗಾವಿ :ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಛಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಈ ವೇಳೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಪಿಡಿಒಗಳ ನಡುವೆ ಸಮನ್ವಯವಿಲ್ಲ. ಇದರಿಂದ ಯೋಜನೆಗಳ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ.
ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಛಕ್ತಿ ಪೂರೈಕೆ ಸಮಸ್ಯೆಗಳಿವೆ. ಅನೇಕ ಫಲಾನುಭವಿಗಳಿಗೆ ಮನೆ ಮಂಜೂರಾಗಿದ್ದರೂ ಹಂಚಿಕೆಯಾಗುತ್ತಿಲ್ಲ ಎಂದು ಗ್ರಾಮ ಪಂಚಾಯತ್ ಸದಸ್ಯರು ದೂರಿದರು.