ಬೆಳಗಾವಿ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ತಕ್ಷಣವೇ ರೈತ ವಿರೋಧಿ ನೀತಿ ಕೈ ಬಿಡಬೇಕು: ಸತೀಶ್ ಜಾರಕಿಹೊಳಿ - KPCC working manger Sathish jarkiholi
ರೈತರ ಜೊತೆ ಕಾಂಗ್ರೆಸ್ ಪಕ್ಷ ಇರುತ್ತದೆ. ಆದ್ರೆ ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಗಳನ್ನು ಕೈ ಬಿಡುವಂತೆ ಸತೀಶ್ ಜಾರಕಿಹೊಳಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
![ಕೇಂದ್ರ ಸರ್ಕಾರ ತಕ್ಷಣವೇ ರೈತ ವಿರೋಧಿ ನೀತಿ ಕೈ ಬಿಡಬೇಕು: ಸತೀಶ್ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ](https://etvbharatimages.akamaized.net/etvbharat/prod-images/768-512-9726178-thumbnail-3x2-mng.jpg)
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಜಾರಕಿಹೊಳಿ, ದೆಹಲಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ನಡೆಸುತ್ತಿರುವ ರೈತರ ಹೋರಾಟ ನಿಜವಾಗಲೂ ನ್ಯಾಯಸಮ್ಮತವಾಗಿದೆ. ರೈತರ ಜೊತೆ ನಮ್ಮ ಕಾಂಗ್ರೆಸ್ ಪಕ್ಷ ಇರುತ್ತದೆ. ಹೀಗಾಗಿ ತಕ್ಷಣವೇ ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಗಳನ್ನು ಕೈ ಬಿಡುವಂತೆ ಒತ್ತಾಯಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ