ಚಿಕ್ಕೋಡಿ: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧೆ ಖಚಿತ ಹಾಗೂ ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ ಎಂದು ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ: ಸತೀಶ್ ಜಾರಕಿಹೊಳಿ ವಿಶ್ವಾಸ - ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಸ್ಪರ್ಧೆ
ಬೆಳಗಾವಿ ಲೋಕಸಭೆಯಿಂದ ಸ್ಪರ್ಧೆ ಮಾಡಿ ನಾನು ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಯಮಕನಮರಡಿ ಕ್ಷೇತ್ರದ ಜನತೆಯ ಅಭಿಪ್ರಾಯ ಪಡೆಯಲು ಸಭೆ ನಡೆಸಿದ್ದೇನೆ. ಯಮಕನಮರಡಿ ಕ್ಷೇತ್ರದ ಜನ ಬೆಳಗಾವಿ ಲೋಕಸಭೆಯಿಂದ ಸ್ಪರ್ಧೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಪಕ್ಷದ ತೀರ್ಮಾನ ಹಾಗೂ ಆದೇಶಕ್ಕೆ ನಾವು ಬದ್ಧ ಇರಬೇಕು. ಜನರ ಒಪ್ಪಿಗೆಯ ಅಭಿಪ್ರಾಯವನ್ನ ಹೈ ಕಮಾಂಡ್ಗೆ ತಿಳಿಸುತ್ತೇವೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ದೂರು ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ನನಗೆ ಸಂಬಂಧಪಟ್ಟ ವಿಚಾರವಲ್ಲ. ಬಹಳ ದಿನಗಳ ಹಿಂದೆಯೇ ದೂರು ನೀಡಬೇಕು ಎಂದು ಹೇಳಿದ್ದೇನೆ, ತೊಂದರೆಯಾಗಿದ್ದರೆ ದೂರು ನೀಡಬೇಕು ಎಂದರು.