ಕರ್ನಾಟಕ

karnataka

ETV Bharat / state

ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪನೆಗೆ ಶಾಸಕ ಸತೀಶ್​ ಜಾರಕಿಹೊಳಿ ಭೂಮಿ ಪೂಜೆ - belagavi bhoomi pooja for shivaji maharaj staue

ಎಲ್ಲಾ ಗ್ರಾಮಗಳಲ್ಲೂ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪನೆ ನಡೆಯುತ್ತಿದೆ. ಹೊನಗಾ ಗ್ರಾಮದಲ್ಲೂ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪಿಸಲಾಗುತ್ತಿರುವುದು ಸಂತಸದ ಸಂಗತಿ..

belagavi
ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪನೆಗೆ ಭೂಮಿ ಪೂಜೆ

By

Published : Oct 26, 2020, 7:30 PM IST

ಬೆಳಗಾವಿ: ತಾಲೂಕಿನ ಹೊನಗಾದಲ್ಲಿ ಬೈರವನಾಥ್ ಚೌಕ್‍ದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್​ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಸತೀಶ್​ ಜಾರಕಿಹೊಳಿ ಅವರು, ಶಿವಾಜಿ ಮಹಾರಾಜರು ರಾಷ್ಟ್ರ ಕಂಡ ಅಪ್ರತಿಮ ನಾಯಕ. ಎಲ್ಲಾ ವರ್ಗದ ಜನರನ್ನು ಜೊತೆಯಲ್ಲಿ ಕರೆದುಕೊಂಡು ಸಮಗ್ರ ಅಭಿವೃದ್ಧಿಯ ಕನಸು ಕಂಡಿದ್ದರು. ಆ ದಿಕ್ಕಿನಲ್ಲಿ ಕೆಲಸ ಮಾಡಿದ ಶಿವಾಜಿ ಮಹಾರಾಜರು ಮಹಾಪುರುಷರ ಸಾಲಿನಲ್ಲಿ ನಿಲ್ಲುತ್ತಾರೆ.

ಎಲ್ಲಾ ಗ್ರಾಮಗಳಲ್ಲೂ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪನೆ ನಡೆಯುತ್ತಿದೆ. ಹೊನಗಾ ಗ್ರಾಮದಲ್ಲೂ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪಿಸಲಾಗುತ್ತಿರುವುದು ಸಂತಸದ ಸಂಗತಿ ಎಂದರು.

ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪನೆಗೆ ಭೂಮಿ ಪೂಜೆ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದು ಸುಣಗಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಆನಂದ ಪಾಟೀಲ, ತಾಲೂಕು ಪಂಚಾಯತ್ ಸದಸ್ಯ ಚಂದ್ರಾ ನಾಯ್ಕ‌ ಇದ್ದರು.

ABOUT THE AUTHOR

...view details