ಚಿಕ್ಕೋಡಿ:ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಲ್ಲಿನ ಗೊಂದಲ, ಮಹಾರಾಷ್ಟ್ರ ಏಕೀಕರಣ ಸಮಿತಿಯ ಅತೀಯಾದ ಆತ್ಮವಿಶ್ವಾಸವೆ ಬಿಜೆಪಿಗೆ ಲಾಭವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಹುಕ್ಕೇರಿ ತಾಲೂಕು ಪಂಚಾಯಿತಿ ಸಂಭಾಗಣದಲ್ಲಿ ನಡೆದ ಕೆಡಿಪಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಏನು ಮ್ಯಾಜಿಕ್ ಆಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿನ ಹಲವರು ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದರು. ಅಲ್ಲದೆ ಎಂಇಎಸ್ ಅತೀಯಾದ ಆತ್ಮವಿಶ್ವಾಸ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಾಗಿದೆ ಎಂದರು.
ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸುವ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಹೊಸ ಕಾಮಗಾರಿಗಳು ಹಾಗೂ ಹಲವಾರು ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.