ಕರ್ನಾಟಕ

karnataka

ಗುಜರಾತ್​​ನಲ್ಲಿ ಕಾಂಗ್ರೆಸ್‌ ಸೋಲಿಗೆ ಮೋದಿ ಮ್ಯಾಜಿಕ್ ಅಲ್ಲ, ಆಪ್‌ ಕಾರಣ: ಸತೀಶ್‌ ಜಾರಕಿಹೊಳಿ

By

Published : Dec 9, 2022, 5:22 PM IST

ಅಕ್ಕಲಕೋಟೆಯ ಜನರು ಕರ್ನಾಟಕಕ್ಕೆ ಬರುವುದಾಗಾಗಿ ಹೇಳಿದ್ದಾರೆ. ಅವರು ಇಲ್ಲಿ ಬರೋಕೆ ಆಗಲ್ಲ, ನಾವು ಅಲ್ಲಿ ಹೋಗೋಕೆ ಆಗಲ್ಲ. ಅದು ಕೇವಲ ಚರ್ಚೆಗೆ ಸೀಮಿತ ಎಂದು ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

satish jarkiholi reaction on gujarat election results
satish jarkiholi reaction on gujarat election results

ಬೆಳಗಾವಿ: ಗುಜರಾತ್​​ನಲ್ಲಿ ಕಾಂಗ್ರೆಸ್‌ ಸೋಲಿಗೆ ಆಮ್‌ ಆದ್ಮಿ ಪಕ್ಷ ಕಾರಣ. ಶೇ 13% ರಷ್ಟು ಕಾಂಗ್ರೆಸ್‌ ಮತಗಳನ್ನು ಅವರು ಪಡೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದ ಜಾಧವನಗರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್​​ನಲ್ಲಿ ಇಷ್ಟು ಕಡಿಮೆ ಸ್ಥಾನ ಬರಬಹುದು ಎಂದು ನಾವು ನಿರೀಕ್ಷೆ ಕೂಡ ಮಾಡಿರಲಿಲ್ಲ ಎಂದು ತಿಳಿಸಿದರು.

ಗೆಲ್ಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್:‌ ಸ್ಟ್ರ್ಯಾಟಜಿ ಮಾಡದೆ ರಾಜ್ಯದಲ್ಲಿ ನಾವು ಚುನಾವಣೆ ಗೆಲ್ಲಲು ಆಗಲ್ಲ. ಆದರೆ, ನಮ್ಮಲ್ಲಿ ಸೋಲುತ್ತಾರೆ ಎಂದು ಗೊತ್ತಿದ್ದರೂ ಟಿಕೆಟ್ ನೀಡುತ್ತಾರೆ. ಸೀನಿಯರ್​ ಅಂತಾ ಟಿಕೆಟ್ ನೀಡುತ್ತೇವೆ. ಗೆಲ್ಲುವ ಹಾಗಿದ್ದರೆ ಮಾತ್ರ ಹಿರಿಯರಿಗೆ ಟಿಕೆಟ್ ನೀಡುವಂತಾಗಬೇಕು. ಜಾತಿ ಯುಗ ಮುಗಿದಿದೆ, ಕೆಲಸ ಮಾಡುವುದನ್ನು ಜನ ನೋಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್​​​​ ಪಕ್ಷದಲ್ಲಿ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಂಬರುವ ಚುನಾವಣೆ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ:ಪುತ್ರನ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸಂಚಾರ: ಹೀಗಿದೆ ರಾಜಕೀಯ ಲೆಕ್ಕಾಚಾರ..

ಗುಜರಾತ್‌ನಲ್ಲಿ ಆಮ್‌ ಆದ್ಮಿ ಪಕ್ಷದಂತೆ ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ಗೆ ಸ್ಪರ್ಧೆ ನೀಡುವ ಬಗ್ಗೆ ಮಾತನಾಡಿ, ಕರ್ನಾಟಕದಲ್ಲಿ ಜೆಡಿಎಸ್‌ ಇದೆ. ಜೆಡಿಎಸ್‌ ಸೀಮಿತ ಕ್ಷೇತ್ರದಲ್ಲಿದೆ. ಗುಜರಾತ್‌ನಲ್ಲಿ ಆಪ್‌ನಿಂದ ಆದಂತಹ ಪರಿಸ್ಥಿತಿ ಕರ್ನಾಟಕದಲ್ಲಿಲ್ಲ, ಜೆಡಿಎಸ್‌ನವರು ಗೆಲ್ಲುವ ಸ್ಥಾನದಲ್ಲಿ ಗೆಲ್ಲುತ್ತಾರೆ. ನಾವು ಎಲ್ಲಿ ಗೆಲ್ಲಬೇಕು ಅಲ್ಲಿ ಗೆಲ್ಲುವಂತಹ ಪ್ರಯತ್ನವನ್ನು ನಾವು ಮಾಡುತ್ತೇವೆ ಎಂದರು.

ಹಿಮಾಚಲ ಗೆಲುವಿಗೆ ಖರ್ಗೆ, ಪ್ರಿಯಂಕಾ ಗಾಂಧಿ ಕಾರಣ:ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆಲುವಿಗೆ ಅಲ್ಲಿನ ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ಅಲೆ ಕಾರಣ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಂಕಾ ಗಾಂಧಿ ಮತ್ತು ಕಾಂಗ್ರೆಸ್‌ ಚುನಾವಣಾ ಉಸ್ತುವಾರಿಗಳು ಅಲ್ಲಿ ಚುನಾವಣಾ ತಂತ್ರಗಳನ್ನು ಹೆಣೆದು ಭರ್ಜರಿ ಪ್ರಚಾರ ನಡೆಸಿದ್ದರಿಂದ ಕಾಂಗ್ರೆಸ್‌ ಪಕ್ಷ 40 ಸೀಟು ಪಡೆದು ಗೆಲುವು ಸಾಧಿಸಿದೆ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಲು ಡಿಕೆಶಿ ಒದ್ದಾಡುತ್ತಿದ್ದಾರೆ ಎಂಬ ಡಾ.ಜಿ.ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿಕೆಶಿ ರಾತ್ರಿ-ಹಗಲು ಪಕ್ಷಕ್ಕಾಗಿ ಕೆಲಸ ಮಾಡ್ತಿದ್ದಾರೆ. ಬಹಳ ಆ್ಯಕ್ಟಿವ್ ಇದ್ದಾರೆ, ಸಾಕಷ್ಟು ಕೆಲಸ ಮಾಡಿದ್ದಾರೆ. ಕೆಲವೊಂದು ಸಾರಿ ಲೆಕ್ಕಾಚಾರಗಳು ತಪ್ಪಾಗುತ್ತವೆ. ಹುದ್ದೆ ದೊಡ್ಡದಲ್ಲ. ನಾವೆಲ್ಲರೂ ನಿಮ್ಮ ಜೊತೆಗೆ ಇರುತ್ತೇವೆ, ಕೆಲಸ ಮಾಡಿ ಅಂತಾ ಹೇಳಬೇಕಾಗುತ್ತದೆ. ಆ ಸಂದರ್ಭದಲ್ಲಿ ಆ ರೀತಿ ಡಾ.ಜಿ.ಪರಮೇಶ್ವರ ಹೇಳಿರಬಹುದು ಎಂದು ತಿಳಿಸಿದರು.

ಕಾಂಗ್ರೆಸ್ ಕಡೆ ಮುಖ ಮಾಡಲಿದ್ದಾರೆ ಜನ: ಬೆಳಗಾವಿ ಮತ್ತು ಇಡೀ ರಾಜ್ಯಕ್ಕೆ ಬದಲಾವಣೆ ಮಾಡಬೇಕು ಅಂತಾ ನನ್ನ ಅನಿಸಿಕೆ. ಇದರಿಂದ 20 ಸೀಟ್ ಹೆಚ್ಚು ಗೆಲ್ಲಬಹುದು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಂತಾ ಜನ ನೋಡ್ತಿದ್ದಾರೆ. ಸಿದ್ದರಾಮಯ್ಯ ಕಾಲದ ಸಾಕಷ್ಟು ಯೋಜನೆ ಸ್ಥಗಿತ ಮಾಡಿದ್ದು ಜನರಿಗೆ ಗೊತ್ತಿದೆ ಎಂದರು.

ಇದನ್ನೂ ಓದಿ:ಪಕ್ಷ ಬೇರೆ ಇದ್ದರೂ ನೆಲ, ಜಲ ವಿಚಾರದಲ್ಲಿ ನಾವೆಲ್ಲ ಒಂದೇ: ಎಂಇಎಸ್‌ಗೆ ಸವದಿ ಎಚ್ಚರಿಕೆ

ಕುಟುಂಬಸ್ಥರಿಗೆ ಟಿಕೆಟ್ ನೀಡುವಂತೆ ಹಲವು ನಾಯಕರ ಅರ್ಜಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕುಟುಂಬ ರಾಜಕಾರಣದಲ್ಲಿ ಗೆಲ್ಲುವ ಕೆಪ್ಯಾಸಿಟಿ ಇದ್ರೆ ಕೊಡಬಹುದು. ಅವರು ಗೆಲ್ತಾರೆ ಅಂದ್ರೆ ಒಂದೇ ಕುಟುಂಬಕ್ಕೆ ಎರಡು ಮೂರು ಟಿಕೆಟ್ ಕೊಡಬಹುದು ಎಂದರು. 2023ರಲ್ಲಿ ದಲಿತ ಸಿಎಂ ಆಗಬೇಕು ಎಂಬುದು ಗುರಿಯಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅನ್ನೋದೇ ಗುರಿ ಎಂದು ಅವರು ತಿಳಿಸಿದರು.

ಬಿಜೆಪಿ ಶಾಸಕರಿಬ್ಬರೇ ಮೇಯರ್, ಉಪಮೇಯರ್: ಮಹಾನಗರ ಪಾಲಿಕೆ ಚುನಾವಣೆ ನಡೆದು ಒಂದು ವರ್ಷವಾದರೂ ಮೇಯರ್, ಉಪಮೇಯರ್ ಚುನಾವಣೆ ನಡೆಯದಿಲ್ಲ. ಪಾಲಿಕೆ ಸದಸ್ಯರಿಗೆ ಅಧಿಕಾರ ಎನ್ನುವುದು ಈಗ ಸಿಗಬಹುದು, ನಾಳೆ ಸಿಗಬಹುದು ಎನ್ನುವಂತಾಗಿದೆ.

ಬಿಜೆಪಿ ಶಾಸಕರಿಬ್ಬರೇ ಮೇಯರ್, ಉಪಮೇಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ತಮಗೆ ಎಲ್ಲಿ ಬೇಕೋ ಅಲ್ಲಿ ಕೆಲಸ ಮಾಡಿಸಿ ಹಣ ಬಿಡುಗಡೆ ಮಾಡಿಕೊಳ್ಳುತ್ತಿದ್ದಾರೆ. ಪಾಲಿಕೆ ಕ್ರಮ ಇದೇ ರೀತಿ ಮುಂದುವರೆದರೆ ಮುಂದೆ ಒಂದು ದಿನ ಗೌನ್​​ಗಳನ್ನು ಹಸ್ತಾಂತರಿಸುವ ಕಾರ್ಯ ನಡೆಯಲಿದೆ ಎಂದರು.

ಗಡಿಯ ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರದಲ್ಲಿರುವ ಜತ್, ಅಕ್ಕಲಕೋಟೆಯ ಜನ ಕರ್ನಾಟಕಕ್ಕೆ ಬರುವುದಾಗಿ ಹೇಳಿದ್ದಾರೆ. ಅವರು ಇಲ್ಲಿ ಬರೋಕೆ ಆಗಲ್ಲ. ನಾವು ಅಲ್ಲಿ ಹೋಗೋಕೆ ಆಗಲ್ಲ. ಅದು ಕೇವಲ ಚರ್ಚೆಗೆ ಸೀಮಿತವಾಗುತ್ತದೆ. ಒಂದು ಬಾರಿ ವಿಭಜನೆಯಾದರೆ ಅದು ಅಂತಿಮ‌. ಈ ಭಾಗದ ಜನರಿಗೆ ಕುಡಿಯುವ ನೀರು ಕೊಡದಿರುವುದು ಮಹಾರಾಷ್ಟ್ರದ ರಾಜಕೀಯ ಗಿಮಿಕ್ ಎಂದರು.

ಇದನ್ನೂ ಓದಿ:ಅಧಿವೇಶನದ ದಿನವೇ ಬೆಳಗಾವಿಯಲ್ಲಿ ಮಹಾಮೇಳಾವ್​ಗೆ ಎಂಇಎಸ್​ ಸಿದ್ಧತೆ: ಅನುಮತಿ ಕೋರಿ ಅರ್ಜಿ

ABOUT THE AUTHOR

...view details