ಬೆಳಗಾವಿ: ಭೂತರಾಮನಹಟ್ಟಿ ಗ್ರಾಮದಲ್ಲಿ ಬೆಂಕಿ ತಗುಲಿ 35 ಬಣವೆಗಳು ಸುಟ್ಟು ಹಾನಿಗೊಳಗಾದ ಕುಟುಂಬಸ್ಥರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ತಲಾ ಹತ್ತು ಸಾವಿರ ರೂ. ಪರಿಹಾರ ನೀಡಿದರು.
ಯಮಕನಮರಡಿ ಕೇತ್ರದ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಮನಹಟ್ಟಿ ಗ್ರಾಮದಲ್ಲಿ ಫೆ.25ರಂದು 35 ಬಣವೆಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಈ ಕುರಿತು ಸ್ಥಳಕ್ಕೆ ಉಪ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.