ಕರ್ನಾಟಕ

karnataka

ETV Bharat / state

ಸತೀಶ್‌ ಜಾರಕಿಹೊಳಿ ಸಿಎಂ ಆಗ್ತಾರೆ.. ಅದಕ್ಕಾಗಿ ಸೈಡ್‌ಲೈನ್‌ ಮಾಡಲಾಗ್ತಿದೆ ಎಂದ ಬೆಂಬಲಿಗರು.. - ಸತೀಶ್​ ಜಾರಕಿಹೊಳಿಗೆ ಲೋಕಸಭೆ ಟಿಕೆಟ್

ಮುಂದಿನ ಸಿಎಂ ಅಭ್ಯರ್ಥಿ ಸತೀಶ್​ ಜಾರಕಿಹೊಳಿ ಅವರನ್ನು ಸೈಡ್‌ಲೈನ್ ಮಾಡುವ ಹುನ್ನಾರ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆದ ಪರಿಸ್ಥಿತಿ ಸತೀಶ್​ ಜಾರಕಿಹೊಳಿ ಅವರಿಗೆ ಬರಬಹದು..

ವಿರೋಧ
ವಿರೋಧ

By

Published : Mar 22, 2021, 4:14 PM IST

ಚಿಕ್ಕೋಡಿ :ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಶಾಸಕ ಸತೀಶ್​ ಜಾರಕಿಹೊಳಿಗೆ ಟಿಕೆಟ್ ಬಹುತೇಕ ಫೈನಲ್ ಆಗಿದೆ. ಕಾಂಗ್ರೆಸ್ ಟಿಕೆಟ್ ನೀಡ್ತಿರುವುದಕ್ಕೆ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಶಾಸಕ ಸತೀಶ್​ ಜಾರಕಿಹೊಳಿಗೆ ಲೋಕಸಭೆ ಟಿಕೆಟ್ ನೀಡುವುದಕ್ಕೆ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದು, ಯಮಕನಮರಡಿ ಶಾಸಕರಾಗಿಯೇ ಮುಂದುವರೆಯುವಂತೆ ಪಟ್ಟು ಹಿಡಿದಿದ್ದಾರೆ.

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಬೆಂಬಲಿಗರಿಂದ ತೀವ್ರ ವಿರೋಧ

ಮುಂದಿನ ಸಿಎಂ ಅಭ್ಯರ್ಥಿ ಸತೀಶ್​ ಜಾರಕಿಹೊಳಿ ಅವರನ್ನು ಸೈಡ್‌ಲೈನ್ ಮಾಡುವ ಹುನ್ನಾರ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆದ ಪರಿಸ್ಥಿತಿ ಸತೀಶ್​ ಜಾರಕಿಹೊಳಿ ಅವರಿಗೆ ಬರಬಹದು.

ಹಾಗಾಗಿ, ಬೆಳಗಾವಿ ಲೋಕಸಭಾ ಟಿಕೆಟ್ ನೀಡದಂತೆ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಯುತ್ ಕಾಂಗ್ರೆಸ್ ಪದಾಧಿಕಾರಿಗಳಿಂದ ಟಿಕೆಟ್ ನೀಡದಂತೆ ಒತ್ತಾಯ ಮಾಡಿದರು.

ಇದನ್ನೂ ಓದಿ..ಪರಿಷತ್‌ನಲ್ಲಿ ಕಾಂಗ್ರೆಸ್‌ನಿಂದ ಸಿಡಿ 'ಪ್ಲೇ'.. ಆಡಳಿತ ಪಕ್ಷದಿಂದ 'ಆಫ್'..

ABOUT THE AUTHOR

...view details