ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿರುವ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನದ ಹುಂಡಿ ಹಣದ ಎಣಿಕೆ ನಡೆಸಲಾಯಿತು.
ದೇವಸ್ಥಾನದ ಟ್ರಸ್ಟ್ ಕಮಿಟಿ ಸಿಇಒ ರವಿ ಕೊಟಾರಗಸ್ತಿ, ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಎಂ.ಬಿ. ವಾಲಿ, ಜಿಲ್ಲಾಡಳಿತ ಹಾಗೂ ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿಗಳ ಹಣದ ಎಣಿಕೆ ಮಾಡಲಾಯಿತು.
ಸವದತ್ತಿಯ ಯಲ್ಲಮ್ಮ ದೇವಾಲಯದ ಹುಂಡಿ ಎಣಿಕೆ ಜನವರಿಯಿಂದ ಇಲ್ಲಿಯವರೆಗೆ ಹುಂಡಿಯಲ್ಲಿ ಸಂಗ್ರಹವಾದ ದೇಣಿಗೆ ಹಣವನ್ನು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಮಾಡಲಾಗಿದ್ದು, ಈವರೆಗೆ ಒಟ್ಟು 38.27 ಲಕ್ಷ ರೂ. ನಗದು, 197 ಗ್ರಾಂ ಚಿನ್ನಾಭರಣ ಹಾಗೂ ಒಂದೂವರೆ ಕೆಜಿ ಬೆಳ್ಳಿ ಆಭರಣಗಳ ಸಂಗ್ರಹವಾಗಿದೆ ಎಂದು ದೇವಸ್ಥಾನ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ನಗದು, ಚಿನ್ನ ಹಾಗೂ ಬೆಳ್ಳಿ ಆಭರಣ ಸೇರಿ 55 ಲಕ್ಷ ರೂ ಅಧಿಕ ದೇಣಿಗೆ ದಿನದೊಳಗೆ ಸಂಗ್ರಹವಾಗಿದೆ.