ಬೆಳಗಾವಿ:ಪ್ರವಾದಿ ಮೊಹಮದ್ ಪೈಗಂಬರ್ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎಸ್ಡಿಪಿಐ ಸಂಘಟನೆ ಪ್ರತಿಭಟನೆ ನಡೆಸಿತು.
ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು ಕೂಡಲೇ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸಬೇಕು. ಅಲ್ಲದೇ ದೇಶದ ಘನತೆಯನ್ನು ಕಳೆದ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದರು.