ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮಳೆ ಮುಂದುವರೆದಿದ್ದು, ಮಹಾಬಲೇಶ್ವರ, ವಾರಣಾ, ನವಜಾ, ಸಾಂಗಲಿ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಮಳೆ ಬೀಳುತ್ತಿರುವುದರಿಂದ ಕೃಷ್ಣಾ ನದಿಯಲ್ಲಿ ನೀರಿನ ಹರಿಯುವ ಮಟ್ಟ ಹೆಚ್ಚಾಗುತ್ತಿದೆ.
ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರು: ಚಿಕ್ಕೋಡಿಗೆ ಎಸ್ಡಿಆರ್ಎಫ್ ತಂಡ - SDRF team
ಕೃಷ್ಣಾ ನದಿ ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ಚಿಕ್ಕೋಡಿ ಸೇರಿದಂತೆ ನದಿ ತೀರ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ವಿಪತ್ತು ನಿರ್ವಹಣಾ ತಂಡ ಆಗಮಿಸಿದೆ.
ಚಿಕ್ಕೋಡಿಗೆ ಎಸ್ ಡಿ ಅರ್ ಎಫ್ ತಂಡ
ಕೃಷ್ಣಾ ನದಿ ನೀರಿನ ಹರಿವು 5 ಅಡಿಯಷ್ಟು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ, ರಾಯಭಾಗ, ಅಥಣಿ, ಕಾಗವಾಡ ತಾಲೂಕಿನ ಹಲವು ಗ್ರಾಮಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಇದರಿಂದಾಗಿ ಚಿಕ್ಕೋಡಿ ಪಟ್ಟಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ವಿಪತ್ತು ನಿರ್ವಹಣಾ ತಂಡ ಬಂದಿಳಿದಿದೆ.