ಅಥಣಿ: ಕೊರೊನಾ ಲಾಕ್ ಡೌನ್ ಹಿನ್ನೆಲೆ ಶಾಸಕ ಮಹೇಶ್ ಕುಮಟಳ್ಳಿ ಅಧಿಕಾರಿಗಳ ಜೊತೆಗೂಡಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಜನರೊಂದಿಗೆ ಸಮಾಲೋಚನೆ ನಡೆಸಿದರು.
ಕಳೆದ ಬಾರಿ ಪ್ರವಾಹ ಉಂಟಾಗಿ ಜನರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಈ ನಡುವೆ ಕೊರೊನಾ ಲಾಕ್ ಡೌನ್ ಘೋಷಣೆಯಾಗಿ ದಿನಗಗೂಲಿ ಕಾರ್ಮಿಕರು ಇನ್ನಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಹೀಗಾಗಿ ತಾಲೂಕಿನ ಸತ್ತಿ, ದರೂರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕರು ಜನರ ಕಷ್ಟ ಆಲಿಸಿದರು.
ಜನರೊಂದಿಗೆ ಸಮಾಲೋಚನೆ ನಡೆಸಿದ ಶಾಸಕ ಮಹೇಶ್ ಕುಮಟಳ್ಳಿ ಈ ವೇಳೆ ಈಟಿವಿ ಭಾರತದೊಂದಿಗೆ ಮಾತನಾಡಿದ ಶಾಸಕರು, ಕೊರೊನಾ ವೈರಸ್ ಹಿನ್ನೆಲೆ ಅಥಣಿ ರೆಡ್ ಝೋನ್ನಲ್ಲಿದೆ. ನಮ್ಮ ಅಕ್ಕ ಪಕ್ಕದ ಜಮಖಂಡಿ, ಕುಡಚಿ, ವಿಜಯಪುರ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ಜನ ಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಅಥಣಿಯನ್ನು ಸೀಲ್ ಡೌನ್ ಮಾಡಿದರೆ ಒಳ್ಳೆಯದು ಎಂದರು.
ತಹಶೀಲ್ದಾರ್ ದುಂಡಪ್ಪ ಕೋಮಾರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ, ಸಿಪಿಐ ಶಂಕರಗೌಡ ಬಸನಗೌಡ ಶಾಸಕರಿಗೆ ಸಾಥ್ ನೀಡಿದರು.