ಚಿಕ್ಕೋಡಿ:ಸಹಕಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ನನ್ನನ್ನುಬಿಜೆಪಿ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದು ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಈಗಾಗಲೇ ಜನಪರ ಯೋಜನೆಗಳನ್ನು ಜಾರಿ ತಂದಿದ್ದಾರೆ. ಬೇಟಿ ಬಚಾವೊ, ಬೇಟಿ ಪಡಾವೊ, ಉಜ್ವಲ ಯೋಜನೆ, ಜನಧನ್ ಹಾಗೂ ರೈತ ಸಮ್ಮಾನ್ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇನ್ನೂ ಹೆಚ್ಚಿನ ಕೆಲಸ ಮಾಡಲು ಮೋದಿಯವರಿಗೆ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಅವರ ಕೈ ಬಲಪಡಿಸೋಣ ಎಂದು ಕರೆ ನೀಡಿದರು.