ಬೆಳಗಾವಿ/ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂತರ್ಜಲಮಟ್ಟ ಕುಸಿತಗೊಂಡಿದೆ. ಈ ಕುರಿತಾಗಿ ಅಧ್ಯಯನ ಮಾಡಿ ಸೂಕ್ತ ಶಿಫಾರಸು ಮಾಡಲು ತಜ್ಞರನ್ನು ಒಳಗೊಂಡ ವಾಟರ್ ಆಡಿಟ್ ಕಮಿಟಿ ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಗೆ ತಿಳಿಸಿದರು.
ಇಂದು ಬರ ವಿಷಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರಕಾರವು ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ. ಎಲ್ಲ ಜಿಲ್ಲಾ ಪಂಚಾಯತಿಗಳ ಮೂಲಕ ಪ್ರತಿ ಜಿಲ್ಲೆಯಲ್ಲಿ ಕಂಟಿಜೆನ್ಸಿ ಪ್ಲಾನ್ ತಯಾರಿಸಲಾಗಿದೆ. ಪ್ರತಿ ತಿಂಗಳು ತಾವು ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ಜರುಗಿಸಿ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಹೇಳಿದರು.