ಬೆಳಗಾವಿ:ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ: ಹೋರಾಟಗಾರರು ಪೊಲೀಸ್ ವಶಕ್ಕೆ - adavesha Itagy
ಜಿಲ್ಲಾಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನಿಸಲಾಯಿತು. ಈ ವೇಳೆ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದರು.

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ
ಜಿಲ್ಲಾಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿಯಿಂದ ಉತ್ತರ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಕಾರ್ಯಕರ್ತರು ಮುಂದಾಗಿದ್ದರು.
ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಒತ್ತಾಯಿಸಿದ ಹೋರಾಟಗಾರರು ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣ ಮಾಡಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಹೋರಾಟಗಾರರು ಮತ್ತು ಧ್ವಜವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.