ಕರ್ನಾಟಕ

karnataka

ETV Bharat / state

ಸರಣಿ ಮನೆಗಳ್ಳತನ: ಅಂತಾರಾಜ್ಯ ಕಳ್ಳನನ್ನು ಬಂಧಿಸಿದ ಅಥಣಿ ಪೋಲಿಸರು - ಅಥಣಿ ಪೋಲಿಸರಿಂದ ಕಳ್ಳನ ಅರೆಸ್ಟ್

ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಮನೆಗಳ್ಳತನ , 2 ವೈನ್‌ ಶಾಪ್‌ ಕಳ್ಳತನ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಂತಾರಾಜ್ಯ ಕಳ್ಳನನ್ನು ಬಂಧಿಸಿದ ಅಥಣಿ ಪೋಲಿಸರು
ಅಂತಾರಾಜ್ಯ ಕಳ್ಳನನ್ನು ಬಂಧಿಸಿದ ಅಥಣಿ ಪೋಲಿಸರು

By

Published : Feb 21, 2021, 3:23 AM IST

ಅಥಣಿ (ಬೆಳಗಾವಿ):ತಾಲೂಕಿನ ಹಾಗೂ ವಿವಿಧ ಗ್ರಾಮಗಳಲ್ಲಿ ಕಳೆದ ಎರಡು ತಿಂಗಳಿಂದ ಸರಣಿ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಪೋಲಿಸರು ಅಂತಾರಾಜ್ಯ ಕಳ್ಳನನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಜತ್ ಮೂಲದ ರಮೇಶ ಚವ್ಹಾಣ್ ಬಂಧಿತ ಆರೋಪಿ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಮನೆಗಳ್ಳತನ , 2 ವೈನ್‌ ಶಾಪ್‌ ಕಳ್ಳತನ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದು, ಸುಮಾರು 2 ಲಕ್ಷ 99 ಸಾವಿರ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳು ಹಾಗೂ ನಗದು ಹಣವನ್ನು ಪೊಲೀಸರ ವಶಪಡಿಸಿಕೊಂಡಿದ್ದಾರೆ.

ಅಥಣಿ, ರಾಯಭಾಗ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ, ಯಮಕನಮರಡಿ, ದಾವಣಗೆರೆ, ವಿಜಯಪುರ ಪೊಲೀಸ್ ಠಾಣೆಗಳಲ್ಲಿ 20 ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಬಂಧಿಸಿದ ತನಿಖಾ ತಂಡದ ಕಾರ್ಯವನ್ನು ಬೆಳಗಾವಿ ಎಸ್​ಪಿ ಶ್ಲಾಘಿಸಿದ್ದಾರೆ.

ABOUT THE AUTHOR

...view details