ಚಿಕ್ಕೋಡಿ :ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್ ಸೇರಿದಂತೆ ಏಳಕ್ಕೂ ಹೆಚ್ಚು ಮನೆಗಳ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಬೆಳ್ಳಿ, ಬಂಗಾರ ಹಾಗೂ ಇತರೆ ಸಾಮಗ್ರಿಗಳನ್ನು ಕಳ್ಳರು ದೋಚಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದಿದೆ.
ರಾಯಬಾಗ ಪಟ್ಟಣದಲ್ಲಿ ಸರಣಿ ಕಳ್ಳತನ: ಲಕ್ಷಾಂತರ ಮೌಲ್ಯದ ವಸ್ತುಗಳು ಕಳವು - ರಾಯಬಾಗ ಪಟ್ಟಣದಲ್ಲಿ ಸರಣಿ ಕಳ್ಳತನ
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳರು ಸರಣಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.
Serial theft in Raiabaga town at Chikkodi
ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರ ಮನೆ ಸುತ್ತಮುತ್ತಲಿನ ಮನೆಗಳನ್ನು ಟಾರ್ಗೆಟ್ ಮಾಡಿದ ಕಳ್ಳರು, ಬೀಗ ಹಾಕಿದ್ದ ಮನೆಗಳಲ್ಲಿಯೇ ಕಳ್ಳತನ ಮಾಡಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಬಂಗಾರ ಹಾಗೂ ಇತರೆ ಸಾಮಗ್ರಿಗಳನ್ನು ದೋಚಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ರಾಯಬಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.