ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರದ ಲಕ್ಷ್ಮಿ ಬಡಾವಣೆಯ ಮೂರು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗೋಕಾಕ್ ನಗರದ ನಿವಾಸಿ ದಿಲೀಪ್ ಮಜಲೀಕರ್ ಎಂಬುವರ ಮನೆಯಲ್ಲಿ 3 ಲಕ್ಷ ರೂ. ನಗದು, 60 ಗ್ರಾಂ ಚಿನ್ನ, 8 ಕೆ.ಜಿ ಬೆಳ್ಳಿ ಕಳ್ಳತನ ಮಾಡಲಾಗಿದೆ. ಇನ್ನೆರಡು ಮನೆಯಲ್ಲಿ ಸಹ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
ಗೋಕಾಕ್ನಲ್ಲಿ ಸರಣಿ ಮನೆಗಳ್ಳತನ: ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆ - crime news
ಗೋಕಾಕ್ ನಗರದ ಲಕ್ಷ್ಮಿ ಬಡಾವಣೆಯ ಮೂರು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ನಗದು ಸೇರಿದಂತೆ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಖದೀಮರು ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮನೆಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳರು, ರಾತ್ರೋರಾತ್ರಿ ಬೀಗ ಒಡೆದು ಕೃತ್ಯ ಎಸಗಿದ್ದಾರೆ. ಖದೀಮರು ಕೈಚಳಕ ಎದುರು ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಕ್ರೀಡಾಂಗಣಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆಸಿಕೊಂಡ ನಾಲ್ವರು ಪೊಲೀಸ್ ವಶಕ್ಕೆ