ಬೆಳಗಾವಿ:ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಬೆಂಕಿ ಹೊತ್ತಿ ಉರಿದಿದೆ. ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ರಾಜಶ್ರೀ ನಿರ್ವಾಣಿ, ಅಶೋಕ ನಿರ್ವಾಣಿ, ಸೋಮನಗೌಡ ನಿರ್ವಾಣಿ, ದೀಪಾ ನಿರ್ವಾಣಿ ಮತ್ತು ಮಕ್ಕಳಾದ ನವೀನ ನಿರ್ವಾಣಿ, ವಿದ್ಯಾ ನಿರ್ವಾಣಿ, 9 ತಿಂಗಳ ಮಗು ಬಸನಗೌಡ ನಿರ್ವಾಣಿ ಗಾಯಗೊಂಡವರು. ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.