ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಇಬ್ಬರು ದೇಶಕ್ಕಾಗಿ ಮಡಿದ ಮಹನೀಯರು. ಇಂತವರು ನಮ್ಮ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಯುವಜನತೆಗೆ ಪ್ರೇರಣೆ: ಶಶಿಕಲಾ ಜೊಲ್ಲೆ
ಕಿತ್ತೂರು ಕೋಟೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಈ ಇಬ್ಬರು ದೇಶಕ್ಕಾಗಿ ಮಡಿದ ಮಹನೀಯರು. ಇಂತವರು ನಮ್ಮ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು ಎಂದು ಹೇಳಿದರು.
ಕಿತ್ತೂರು ಉತ್ಸವ
ಕಿತ್ತೂರು ಕೋಟೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಿತ್ತೂರು ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಿದ್ದು, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಪಾರಂಪರಿಕ ಸ್ಥಳಗಳ ಅಭಿವೃದ್ಧಿಗೆ ಕಾಯಕಲ್ಪ ಹಾಕಿಕೊಳ್ಳಲಾಗುವುದು ಎಂದರು.
ಉತ್ಸವದ ಉದ್ಘಾಟನೆಗೆ ವೇದಿಕೆಯಲ್ಲಿ ಕಟ್ಟಲಾಗಿರುವ ಸಾಂಕೇತಿಕ ಮನೆಯು ಸಂತ್ರಸ್ತರಿಗೆ ಸೂರು ಒದಗಿಸುವ ಸರ್ಕಾರದ ಬದ್ಧತೆಯ ಸಂಕೇತವಾಗಿದೆ ಎಂದರು.