ಚಿಕ್ಕೋಡಿ: ವೈರಸ್ ವಿರುದ್ಧ ಹೋರಾಡುತ್ತಿರುವ ಎಲ್ಲ ಇಲಾಖೆ ಅಧಿಕಾರಿಗಳಿಗೆ, ಕಾರ್ಯಕರ್ತೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಂದನೆ ಸಲ್ಲಿಸಿದ್ದಾರೆ.
ವೈರಸ್ ವಿರುದ್ಧ ಹೋರಾಡುತ್ತಿರುವ ಅಧಿಕಾರಿಗಳಿಗೆ ವಂದನೆ ಸಲ್ಲಿಸಿದ ಶಶಿಕಲಾ ಜೊಲ್ಲೆ - chikodi latest news
ಮನೆ ಮನೆಗೆ ಹೋಗಿ ಆರೋಗ್ಯದ ಬಗ್ಗೆ ತಪಾಸಣೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಶಶಿಕಲಾ ಜೊಲ್ಲೆ ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾದ ತಮ್ಮ ಮನೆಯ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಆರೋಗ್ಯದ ಬಗ್ಗೆ ತಪಾಸಣೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಕೆಲಸ ನಿಜಕ್ಕೂ ಶ್ಲಾಘನೀಯ ಎಂದರು.
ಕಾರ್ಯಕರ್ತರು ಹಳ್ಳಿಯಿಂದ ಪಟ್ಟಣದ ವರೆಗೆ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು, ಆರೋಗ್ಯ ಸರ್ವೆ ಮಾಡಬೇಕಾದರೆ ಜನರು ಸಹಕರಿಸಬೇಕು ಎಂದು ಇದೇ ವೇಳೆ ಮನವಿ ಮಾಡಿದರು.
Last Updated : Apr 3, 2020, 12:30 PM IST