ಬೆಳಗಾವಿ: ಭಾರತವು 1971ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಜಯಸಾಧಿಸಿ 50 ವರ್ಷ ಪೂರೈಸಿದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ‘ವಿಜಯ ದಿವಸ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1971ರ ಇಂಡೋ-ಪಾಕ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.
‘ವಿಜಯ ದಿವಸ’ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಬೆಳಗಾವಿಯ ಮರಾಠಿ ಲಘು ಪದಾತಿ ದಳ ಕೇಂದ್ರ (ಎಂಎಲ್ಐಆರ್ಸಿ)ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜಯ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಇಂಡೋ-ಪಾಕ್ ಯುದ್ಧವು ಚರಿತ್ರೆಯಲ್ಲಿ ಭಾರತದ ಶಕ್ತಿಗೆ ಸ್ಥಾನ ಒದಗಿಸಿದೆ. ದೇಶವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಇದು ನಮಗೆ ಮತ್ತಷ್ಟು ಸ್ಫೂರ್ತಿಯಾಗಿದೆ ಎಂದರು.
ಯುದ್ಧದಲ್ಲಿ ಮಡಿದ ಯೋಧರಿಗೆ ಗೌರವ ಅರ್ಪಿಸಿದ ಬೊಮ್ಮಾಯಿ ಸೇನೆ ದೇಶ ರಕ್ಷಣೆಯ ಜತೆಗೆ ಆಂತರಿಕ ಭದ್ರತೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಗಡಿಯಾಚೆಗಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುತ್ತಿದೆ. ಇಂಡೋ-ಪಾಕ್ ಯುದ್ಧವು ದೇಶದ ಮೂರೂ ಸೇನಾ ಪಡೆಗಳ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ. 13 ದಿನಗಳ ಯುದ್ಧದಲ್ಲಿ ಅನೇಕ ಮಂದಿ ಹುತಾತ್ಮರಾದರು. 90 ಸಾವಿರಕ್ಕೂ ಅಧಿಕ ಪಾಕಿಸ್ತಾನಿ ಸೈನಿಕರು ಶರಣಾದರು. ಈ ಯುದ್ಧ ಕಲೆಯು ಇಡೀ ಜಗತ್ತು ಭಾರತದ ಸೇನಾಶಕ್ತಿಯ ಕಡೆ ತಿರುಗಿ ನೋಡುವಂತಾಯಿತು.
ಯುದ್ಧದಲ್ಲಿ ಮಡಿದ ಯೋಧರಿಗೆ ಗೌರವ ಅರ್ಪಿಸಿದ ಬೊಮ್ಮಾಯಿ ಈ ಯುದ್ಧದ ಬಳಿಕ ಭಾರತ ಸೇನೆ ಮತ್ತಷ್ಟು ಬಲಿಷ್ಟವಾಗಿದೆ. ಪ್ರಸ್ತುತ ಸಮರಕಲೆಯಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರವಹಿಸುತ್ತಿದೆ. ಭಾರತ ಕೂಡ ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಬಲಿಷ್ಠಗೊಳ್ಳುತ್ತಿದೆ. ಪ್ರಧಾನಮಂತ್ರಿಗಳ ನೇತೃತ್ವದಲ್ಲಿ ಭಾರತೀಯ ಸೇನೆಯು ಗಡಿಯನ್ನು ಸುರಕ್ಷಿತವಾಗಿಸಿದೆ ಎಂದರು.
ಯುದ್ಧದಲ್ಲಿ ಮಡಿದ ಯೋಧರಿಗೆ ಗೌರವ ಅರ್ಪಿಸಿದ ಬೊಮ್ಮಾಯಿ ಶೌರ್ಯ ಪ್ರಶಸ್ತಿಗೆ ನೀಡುವ ಅನುದಾನ 5 ಪಟ್ಟು ಹೆಚ್ಚಳ:
ಶೌರ್ಯ ಪ್ರಶಸ್ತಿ ವಿಜೇತರಿಗೆ ರಾಜ್ಯ ಸರ್ಕಾರದಿಂದ ಒಂದು ಬಾರಿ ನೀಡುವ ನಗದು ಅನುದಾನವನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಸರಾಸರಿ 5 ಪಟ್ಟು ಹೆಚ್ಚಳ ಮಾಡಲಾಗಿದೆ. ಪರಮವೀರ ಚಕ್ರ ₹25 ಲಕ್ಷದಿಂದ ₹1.5 ಕೋಟಿ, ಮಹಾವೀರ ಚಕ್ರ ₹12 ಲಕ್ಷದಿಂದ ₹1 ಕೋಟಿ, ಅಶೋಕ ಚಕ್ರ ₹25 ಲಕ್ಷದಿಂದ ₹1.5 ಕೋಟಿ, ಕೀರ್ತಿ ಚಕ್ರ ₹12 ಲಕ್ಷದಿಂದ ₹1 ಕೋಟಿ,
ವೀರ ಚಕ್ರ ಹಾಗೂ ಶೌರ್ಯ ಚಕ್ರ ತಲಾ ₹8 ಲಕ್ಷದಿಂದ ₹50 ಲಕ್ಷಕ್ಕೆ ಹಾಗೂ ಭೂಸೇನಾ, ನೌಕಸೇನಾ ಹಾಗೂ ವಾಯುಸೇನಾ ಮೆಡಲ್ ತಲಾ ₹ 2 ಲಕ್ಷದಿಂದ ₹15 ಲಕ್ಷಕ್ಕೆ ಮತ್ತು 'ಮೆನ್ ಶನ್ ಎಎನ್‌ಡಿಎಸ್ ಪ್ಯಾಚ್'ಗೆ ₹2 ಲಕ್ಷದಿಂದ ₹15 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಯುದ್ಧದಲ್ಲಿ ಮಡಿದ ಯೋಧರಿಗೆ ಗೌರವ ಅರ್ಪಿಸಿದ ಬೊಮ್ಮಾಯಿ ಶಾಸಕ ಅನಿಲ್ ಬೆನಕೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಎಂಎಲ್ಐಆರ್ಸಿ ಕಮಾಂಡಂಟ್ ಬ್ರಿಗೇಡಿಯರ್ ರೋಹಿತ್ ಚೌಧರಿ, ಹಿರಿಯ ಸೇನಾಧಿಕಾರಿಗಳು, ನಿವೃತ್ತ ಯೋಧರು, ಗಣ್ಯರು ಸೇರಿದಂತೆ ನೂರಾರು ಜನರು ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ:ರಾಜ್ಯದ ನೆಮ್ಮದಿ ಕೆಡಿಸಲು ಬಿಜೆಪಿಗರು ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡ್ತಿದ್ದಾರೆ: ಡಿಕೆಶಿ