ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆಯ (ಠಾಕ್ರೆ ಬಣ) ಆಕ್ಷೇಪ - shiv sena

ಕರ್ನಾಟಕದ ಸಿಎಂ ಮಹಾರಾಷ್ಟ್ರಕ್ಕೆ ಬಂದು ಕರ್ನಾಟಕ ಭವನ ಕಟ್ಟಿದರೆ, ನಮಗೂ ಕರ್ನಾಟಕದಲ್ಲಿ ಮಹಾರಾಷ್ಟ್ರ ಭವನ ಕಟ್ಟಲು ಅವಕಾಶ ನೀಡಬೇಕು. ಮೊದಲು ನೀವು ನಮಗೆ ಭವನ ಕಟ್ಟಲು ಅವಕಾಶ ನೀಡಿ. ಆಮೇಲೆ ನಿಮ್ಮ ಭವನ ಇಲ್ಲಿ ನಿರ್ಮಾಣ ಮಾಡಿಕೊಳ್ಳಿ ಎಂದು ಶಿವಸೇನೆಯ (ಠಾಕ್ರೆ ಬಣ) ಆಕ್ಷೇಪ ವ್ಯಕ್ತಪಡಿಸಿದೆ.

shiv sena
ಶಿವಸೇನೆಯ ಠಾಕ್ರೆ ಬಣ ಆಕ್ಷೇಪ

By

Published : Oct 15, 2022, 11:02 AM IST

Updated : Oct 15, 2022, 2:35 PM IST

ಬೆಳಗಾವಿ: ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆಯ (ಠಾಕ್ರೆ ಬಣ) ಆಕ್ಷೇಪ ವ್ಯಕ್ತಪಡಿಸಿದ್ದು, ಮೊದಲು‌ ಕರ್ನಾಟಕದಲ್ಲಿ ನೀವು ನಮಗೆ ಮರಾಠಿ ಭವನ ಕಟ್ಟಲು ಅವಕಾಶ ನೀಡಬೇಕು. ಆಮೇಲೆ ಕರ್ನಾಟಕ ಭವನ ನಿರ್ಮಾಣ ಮಾಡಿಕೊಳ್ಳಿ ಎಂದು ಕ್ಯಾತೆ ತೆಗೆದಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿವಸೇನೆಯ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಧ್ಯಕ್ಷ ರವಿಕಿರಣ ಇಂಗವಳ್ಳಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಹೋರಾಟದಲ್ಲಿ ಸಾಕಷ್ಟು ನಮ್ಮ ಜನರು ಮೃತರಾಗಿದ್ದಾರೆ. ಆದ್ರೆ, ಅವರಿಗೆ ನ್ಯಾಯ ಕೊಡಿಸುವಂತಹ ಕೆಲಸವನ್ನು ಕರ್ನಾಟಕ ಸರ್ಕಾರ ಮಾಡಿಲ್ಲ.

ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ

ಈಗ ಕರ್ನಾಟಕದ ಸಿಎ‌ಂ ಮಹಾರಾಷ್ಟ್ರದಲ್ಲಿ ಬಂದು ಕರ್ನಾಟಕ ಭವನ ಕಟ್ಟಿದ್ರೆ, ನಮಗೂ ಕರ್ನಾಟಕದಲ್ಲಿ ಮಹಾರಾಷ್ಟ್ರ ಭವನ ಕಟ್ಟಲು ಅವಕಾಶ ನೀಡಬೇಕು. ಮೊದಲು ನೀವು ನಮಗೆ ಭವನ ಕಟ್ಟಲು ಅವಕಾಶ ನೀಡಿ. ಆಮೇಲೆ ನಿಮ್ಮ ಭವನ ಇಲ್ಲಿ ನಿರ್ಮಾಣ ಮಾಡಿಕೊಳ್ಳಿ. ಒಂದು ವೇಳೆ, ನೀವು ಕರ್ನಾಟಕ ಭವನ ಕಟ್ಟಿದ್ದೇ ಆದ್ರೆ ನಾವು ಕರ್ನಾಟಕ ಇರುವ ಹೆಸರು ತೆಗೆದು ಹಾಕುತ್ತೇವೆ ಎಂದು ಸಿಎಂ ಬೊಮ್ಮಾಯಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ ಭರವಸೆ

ಕಳೆದ ಅ.10 ರಂದು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕನ್ನೇರಿ‌ಮಠದಲ್ಲಿ ನಡೆದಿದ್ದ ಸಂತ ಸಮಾವೇಶದಲ್ಲಿ ಭಾಗಿಯಾಗಿದ್ದ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಮೂರು ಕೋಟಿ ನೀಡುತ್ತೇನೆ. ಈಗಾಗಲೇ ಒಂದು ಕೋಟಿ ಅನುದಾನ ಕರ್ನಾಟಕ ಭವನ ನಿರ್ಮಾಣಕ್ಕೆ ನೀಡಲಾಗುತ್ತಿದ್ದು, ಕೆಲಸವನ್ನು ಪ್ರಾರಂಭ ಮಾಡಬೇಕು. ಮುಂಬರುವ ದಿನಗಳಲ್ಲಿ ಕರ್ನಾಟಕ ಭವನದೊಳಗಿನ ಕೆಲಸ ಕಾರ್ಯಕ್ಕೆ ಎರಡು ಕೋಟಿ ನೀಡುತ್ತೇನೆ‌ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ತಾರಕಕ್ಕೇರಿದ ಐಎಂಎ ಹಾಗೂ ಬಾಬಾ ರಾಮ್​ದೇವ್ ಸಮರ: ಬಹಿರಂಗ ಚರ್ಚೆಗೆ ಆಹ್ವಾನ

Last Updated : Oct 15, 2022, 2:35 PM IST

ABOUT THE AUTHOR

...view details